ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಗೋಮಾಳ ಭೂಮಿ ಮಂಜೂರು: ಪ್ರತಿಪಕ್ಷಗಳ ವಿರೋಧ
ರಾಜ್ಯದಲ್ಲಿ ಕಾಂಗ್ರೆಸ್ ಕಚೇರಿಗಳನ್ನು ಸ್ಥಾಪಿಸಲು ಸರ್ಕಾರ ಗೋಮಾಳ ಭೂಮಿಯನ್ನು ನೀಡುತ್ತಿದೆ. ಗೋಮಾಳ ಭೂಮಿಯನ್ನು ಕಾಂಗ್ರೆಸ್ ಕಚೇರಿಗೆ ಯಾವ ನಿಯಮಗಳಡಿ ನೀಡಲಾಗಿದೆ ಎಂದು ಜೆಡಿಎಸ್ ಶಾಸಕ ಸುರೇಶ್ ಬಾಬು ಸದನದಲ್ಲಿ ಪ್ರಶ್ನಿಸಿದರು.
ಕಚೇರಿ ಕಟ್ಟಲು ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಎಸಿಗಳು ಜಾಗ ಮಂಜೂರು ಮಾಡಲು ಹೊರಟಿದ್ದಾರೆ. ಈ ವಿಚಾರದಲ್ಲಿ ಬಡವರಿಗೆ ಒಂದು ನ್ಯಾಯ, ಕಾಂಗ್ರೆಸ್ ಕಚೇರಿಗೆ ಒಂದು ನ್ಯಾಯವೇ ? ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲೂ ಎರಡು ಎಕರೆ ಜಾಗ ಕಚೇರಿಗೆ ಕೊಟ್ಟಿದ್ದಾರೆ. ಇದರ ಬಗ್ಗೆ ಕಂದಾಯ ಸಚಿವರು ಉತ್ತರ ನೀಡಬೇಕು ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಒತ್ತಾಯಿಸಿದರು.

Next Story