
ಜಾತಿ ಗಣತಿ: ಅಂತ್ಯಗೊಂಡ ವಿಶೇಷ ಸಚಿವ ಸಂಪುಟ ಸಭೆ; ವಿವಿಧ ಸಚಿವರಿಂದ ಪರ-ವಿರೋಧ ಅಭಿಪ್ರಾಯ ಮಂಡನೆ
ಜಾತಿ ಗಣತಿ ಸಂಬಂಧ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಈಗ ಅಂತ್ಯಗೊಂಡಿದೆ. ವಿವಿಧ ಸಮೂದಾಯಗಳ ನಾಯಕರು ತಮ್ಮ ತಮ್ಮ ಅಭಿಪ್ರಾಯ ಮಂಡಿಸಿದ್ದು, ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಸಚಿವರು ಅಭಿಪ್ರಾಯಗಳನ್ನು ಮುಖ್ಯಮಂತ್ರಿ ಬಳಿ ಹಂಚಿಕೊಂಡಿದ್ದಾರೆ. ತಮ್ಮ ಸಮುದಾಯಗಳ ಅಸಮಾಧಾನ ಹಾಗೂ ಸಂಶಯಗಳನ್ನು ನಿವಾರಿಸಬೇಕೆಂದೂ ಕೇಳಿಕೊಂಡಿದ್ದಾರೆ.
ಗಣತಿ ಅವೈಜ್ಞಾನಿಕವಾಗಿದೆ ಹಾಗೂ ತಮ್ಮ ತಮ್ಮ ಸಮುದಾಯಗಳ ಜನಸಂಖ್ಯೆಯನ್ನು ತಪ್ಪಾಗಿ ದಾಖಲಿಸಲಾಗಿದೆ ಎಂಬ ಅಭಿಪ್ರಾಯಗಳು ಒಕ್ಕಲಿಗ ಮತ್ತು ಲಿಂಗಾಯತ ಸಚಿವರಿಂದ ಕೇಳಿಬಂದಿದೆ. ಆದರೆ, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ (ಅಹಿಂದ) ಸಚಿವರು ಈ ಗಣತಿಯನ್ನು ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
Next Story