ದೂರದೃಷ್ಟಿ ಯೋಜನೆಗಳಿಗೆ ಅನುದಾನ ನೀಡುವಲ್ಲಿ ಸರ್ಕಾರ ವಿಫಲ
ಯಾವುದಕ್ಕೆ ಆದ್ಯತೆ ಕೊಡಬೇಕು ಎಂದು ಸರ್ಕಾರ ಅರ್ಥ ಮಾಡಿಕೊಂಡಿಲ್ಲ, ದೂರದೃಷ್ಟಿ ಯೋಜನೆಗಳಿಗೆ ಅನುದಾನ ಕೊಡದಿರುವ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ತಿಳಿಸಿದರು.
ವಿಧಾನಸಭೆಯ ನಿಯಮ 69ರಡಿಯಲ್ಲಿ ಅನುದಾನದ ಬಗ್ಗೆ ಚರ್ಚೆ ಮಾಡುತ್ತಾ, ಈ ಸರ್ಕಾರವನ್ನು ಇಲ್ಲಗಳ ಸರ್ಕಾರ ಎಂದು ನಾನು ಕರೆಯುತ್ತೇನೆ. ಇತ್ತೀಚೆಗೆ ಸು ಫ್ರಮ್ ಸೋ ಸಿನಿಮಾ ಪ್ರಸಿದ್ದಿಯಾಗಿದೆ. ಈ ಸರ್ಕಾರ ಬಿ ಫ್ರಮ್ ಸಿ ಯಾಗಿದೆ (ಬೋಗಸ್ ಕಾಂಗ್ರೆಸ್) ಎಂದರು.
ಇದಕ್ಕೆ ಆಡಳಿತ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಕೆಲಕಾಲ ಸದನದಲ್ಲಿ ಗದ್ದಲ ಉಂಟಾಯಿತು.

Next Story