ಕೊಪ್ಪಳದಲ್ಲಿ ಬಸ್ ಗೆ ಕಲ್ಲು ತೂರಿದ ಕಿಡಿಗೇಡಿಗಳು


ಕೊಪ್ಪಳದಲ್ಲಿ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ಕೊಟ್ಟಿದ್ದರೂ ಕೆಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಆಕ್ರೋಶಗೊಂಡ ಕಿಡಿಗೇಡಿಗಳು ಕುಕನೂರು ಬಳಿ ಕೆಎಸ್ಆರ್ಟಿಸಿ ಬಸ್‌ಗೆ ಕಲ್ಲು ತೂರಿದ್ದಾರೆ.

ಸೋಮವಾರ ರಾತ್ರಿ ಯಲಬುರ್ಗಾ ಡಿಪೊದ ಬಸ್ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುವಾಗ ಈ ಘಟನೆ ನಡೆದಿದೆ. ಕಲ್ಲು ತೂರಿದ್ದರಿಂದ ಬಸ್‌ನ ಮುಂಭಾಗದ ಗಾಜಿಗೆ ಹಾನಿಯಾಗಿದೆ.

Read More
Next Story