ಕಡ್ಡಾಯ ಮತದಾನ ಕಾನೂನು ಜಾರಿಗೆ ತರದೇ ಇರೋದು ಈ ದೇಶದ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ಕಡ್ಡಾಯ ಮತದಾನ ಕಾನೂನು ಜಾರಿಗೆ ತರದೇ ಇರೋದು ಈ ದೇಶದ ದುರಂತ: ಸಿದ್ದಗಂಗಾ ಶ್ರೀ

ಹಸುವಿಗೆ ಹಣ್ಣು ತಿನ್ನಿಸಿ ಸಿದ್ದಗಂಗಾ ಮಠದ ಮತಗಟ್ಟೆ ಸಂಖ್ಯೆ 113 ರಲ್ಲಿ ಸಿದ್ದಗಂಗಾ ಶ್ರೀಗಳು ಮತದಾನ ಮಾಡಿದ್ದಾರೆ. ಆ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಮತದಾನ ಮಾಡೋದು ಒಂದು ಪವಿತ್ರ ಕಾರ್ಯ. ಸಿದ್ದಗಂಗಾ ಮಠದ ಸಂಪ್ರದಾಯದಂತೆ ನಾನು ಬಂದು ಮೊದಲು ಮತದಾನ ಮಾಡಿದ್ದೇನೆ. ಶಿವಕುಮಾರ ಶ್ರೀಗಳು ಸಿದ್ದಗಂಗಾ ಮಠದ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡುತ್ತಿದ್ದರು. ಮತದಾನ ಮಾಡಲು ಸರ್ಕಾರ ಎಲ್ಲಾ ರೀತಿಯ ಸವಲತ್ತು ಒದಗಿಸಿ ಕೊಟ್ಟಿದೆ ಎಂದರು.

ಎಲ್ಲರೂ ಬಂದು 100ಕ್ಕೆ 100 ರಷ್ಟು ಮತದಾನ ಮಾಡಬೇಕು. ಕಡ್ಡಾಯ ಮತದಾನ ಕಾನೂನು ಜಾರಿಗೆ ತರದೇ ಇರೋದು ಈ ದೇಶದ ದುರಂತ. ಪ್ರತಿಶತ 100 ಮತದಾನ ಆಗಬೇಕಾದರೆ ಕಡ್ಡಾಯ ಮತದಾನ ಕಾನೂನು ತರಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿಗೆ ಮತದಾನ ಆಗುತ್ತದೆ. ನಗರ ಪ್ರದೇಶದಲ್ಲಿ ಕಡಿಮೆ ಆಗುತ್ತದೆ. ವಿದ್ಯಾವಂತರೇ ಮತದಾನದಿಂದ ದೂರ ಉಳಿಯುತ್ತಾರೆ. ಹೀಗಾಗಬಾರದಿದ್ದರೆ ಕಡ್ಡಾಯ ಮತದಾನ ಜಾರಿಯಾಗಬೇಕು ಎಂದು ಶ್ರೀಗಳು ಒತ್ತಾಯಿಸಿದರು. 

Read More
Next Story