ಮಹಾರಾಷ್ಟ್ರ:  48 ಸಂಸದರನ್ನು ಲೋಕಸಭೆಗೆ ಕಳುಹಿಸುವ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವೆ ಹಣಾಹಣಿ ನಡೆದಿದೆ.

ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ) ಮತ್ತು ಎನ್‌ಸಿಪಿ (ಶರದ್ ಪವಾರ್) ಒಳಗೊಂಡಿರುವ ಎಂವಿಎ 27 ಸ್ಥಾನ,  ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ಒಳಗೊಂಡ ಮಹಾಯುತಿ 19 ಹಾಗೂ 2 ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಎಂವಿಎ ಮೂರು ಪಾಲುದಾರರು ತಲಾ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಹಾಯುತಿ ಪಾಲುದಾರರಲ್ಲಿ ಬಿಜೆಪಿ 15, ಶಿವಸೇನೆ (ಶಿಂಧೆ) 4 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಸಿಪಿ (ಅಜಿತ್ ಪವಾರ್) ಬಣ ತೀವ್ರ ಹಿನ್ನಡೆ ಅನುಭವಿಸಿದೆ. 

Read More
Next Story