ದುರಂತಕ್ಕೆ ರಾಹುಲ್‌ ಸಂತಾಪ; ಸಂತ್ರಸ್ಥರಿಗೆ ನೆರವಾಗಲು ʼಕೈʼ ಕಾರ್ಯಕರ್ತರಿಗೆ ಸೂಚನೆ

ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ‍್ಯಾಲಿಯಲ್ಲಿ ನಡೆದ ದುರಂತ ತೀವ್ರ ದುಃಖ ತಂದಿದೆ. ಈ ಘಟನೆಯಲ್ಲಿ ಅನೇಕ ಅಮೂಲ್ಯ ಜೀವಗಳು ಬಲಿಯಾಗಿವೆ. ಅವರ ಪ್ರೀತಿಪಾತ್ರರಿಗೆ ನನ್ನ ಹೃದಯ ಮಿಡಿಯುತ್ತದೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲ ನೀಡಬೇಕು. ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳಲ್ಲಿ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಬೇಕು ಎಂದು ನಾನು ಕೋರುತ್ತೇನೆ ಎಂದು ಹೇಳಿದ್ದಾರೆ.


Read More
Next Story