ಕರೂರು ಕಾಲ್ತುಳಿತ: ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿರುವ ದುರಂತದಲ್ಲಿ ಅನೇಕರು ಧಾರುಣ ಸಾವನ್ನಪ್ಪಿ, ಇನ್ನೂ ಅನೇಕರು ತೀವ್ರವಾಗಿ ಗಾಯಗೊಂಡಿರುವ ವಿಷಯ ತಿಳಿದು ತೀವ್ರ ಆಘಾತ ಉಂಟಾಯಿತು.
ಇದು ಅತ್ಯಂತ ದುಃಖಕರ ಘಟನೆ. ಮೃತರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಈ ಪ್ರಾಣ ನಷ್ಟವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಹಾಗೂ ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
Next Story