ಜಮ್ಮು ಗಡಿಯಿಂದ ಸುರಕ್ಷಿತವಾಗಿ ಮರಳಿದ ದಕ್ಷಿಣ ರಾಜ್ಯಗಳ ವಿದ್ಯಾರ್ಥಿಗಳು


ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಒಟ್ಟು 489 ವಿದ್ಯಾರ್ಥಿಗಳನ್ನು ಜಮ್ಮುಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಇತರ ರಾಜ್ಯಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಆಂಧ್ರಪ್ರದೇಶದ 350, ತೆಲಂಗಾಣದ 126 ಮಂದಿ, ಕರ್ನಾಟಕದ 13 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ. ಗಡಿಯಲ್ಲಿರುವ ಆಂಧ್ರಪ್ರದೇಶದ ವಿದ್ಯಾರ್ಥಿಗಳಿಗಾಗಿ ದೆಹಲಿಯ ಆಂಧ್ರಪ್ರದೇಶ ಭವನವು 24x7 ನಿಯಂತ್ರಣ ಕೊಠಡಿ ಸ್ಥಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸ್ಥಳಾಂತರಗೊಂಡ ವಿದ್ಯಾರ್ಥಿಗಳು ಶ್ರೀನಗರದ ಎನ್‌ಐಟಿ, ಶೇರ್-ಎ-ಕಾಶ್ಮೀರ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇನ್ನು ಕೆಲವರು ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇದ್ದಾರೆ ಎಂದು ತಿಳಿದು ಬಂದಿದೆ. 

Read More
Next Story