ಹಕ್ಕುಚ್ಯುತಿ ಮಂಡನೆಗೆ ಮುಂದಾದ ಶಾಸಕ ಮುನಿರತ್ನ: ವಿಧಾನಸಭೆಯಲ್ಲಿ ತೀವ್ರ ಗದ್ದಲ
ವಿಧಾನಸಭೆ ಅಧಿವೇಶನದಲ್ಲಿ ಬುಧವಾರ, ಶಾಸಕ ಮುನಿರತ್ನ ಅವರು ಸಚಿವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಒತ್ತಾಯಿಸಿ, ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸಿದರು. 250 ಕೋಟಿ ರೂ. ಮೌಲ್ಯದ ಸರ್ಕಾರಿ ಆಸ್ತಿ ಮಾರಾಟಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರ ವಿರುದ್ಧ ಈ ಹಕ್ಕುಚ್ಯುತಿ ಮಂಡಿಸಲು ಅವರು ಬಯಸಿದ್ದರು.
ಪ್ರಶ್ನೋತ್ತರ ಅವಧಿಯ ನಂತರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಮಾಡಿದ ಮುನಿರತ್ನ "ನನಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ. ನಾನು ಅವಕಾಶ ಕೇಳಿದ್ದೇನೆ, ನೀವು ನನಗೆ ಅವಕಾಶ ಕೊಡಬೇಕು" ಎಂದು ಹಟ ಹಿಡಿದರು. 250 ಕೋಟಿ ರೂ. ಮೌಲ್ಯದ ಆಸ್ತಿ ವಿಚಾರವನ್ನು ಪ್ರಸ್ತಾಪಿಸಿದ ಅವರು, ಇದು ಸರ್ಕಾರದ ಆಸ್ತಿ ಮಾರಾಟಕ್ಕೆ ಸಂಬಂಧಿಸಿದ್ದು ಎಂದು ವಿವರಿಸಿದರು.
Next Story