ಸೌದಿ ಅರೇಬಿಯಾ ಪ್ರವಾಸ‌ ಮೊಟಕು; ಪ್ರಧಾನಿ‌ ಮೋದಿ ವಾಪಸ್
x

ಸೌದಿ ಅರೇಬಿಯಾ ಪ್ರವಾಸ‌ ಮೊಟಕು; ಪ್ರಧಾನಿ‌ ಮೋದಿ ವಾಪಸ್


ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ‌ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ, ಇಂದು ರಾತ್ರಿ ಭಾರತಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಸೌದಿ ಅರೇಬಿಯಾ ಆಯೋಜಿಸಿದ್ದ ಅಧಿಕೃತ ಭೋಜನಕೂಟದಲ್ಲಿ‌ ಭಾಗಿಯಾಗುವುದನ್ನು ತಪ್ಪಿಸಿಕೊಂಡು ತಮ್ಮ ಪ್ರವಾಸ ಮೊಟಕುಗೊಳಿಸಲು ನಿರ್ಧರಿಸಿದ್ದಾರೆ. ಅವರು ಇಂದು(ಮಂಗಳವಾರ) ರಾತ್ರಿ ಭಾರತಕ್ಕೆ ಮರಳಲಿದ್ದಾರೆ. ಅಧಿಕೃತವಾಗಿ ಬುಧವಾರ ರಾತ್ರಿಯೇ ಹಿಂತಿರುಗಬೇಕಿತ್ತು, ಆದರೆ ಈಗ ಬುಧವಾರ ಮುಂಜಾನೆ ಭಾರತಕ್ಕೆ ಆಗಮಿಸಲಿದ್ದಾರೆ.

Read More
Next Story