ಪಹಲ್ಗಾಂವ್ ದಾಳಿಕೋರರನ್ನು ಸದೆಬಡಿಯಬೇಕು: ಎಂ ಬಿ ಪಾಟೀಲ ಆಕ್ರೋಶ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿರುವ ದಾಳಿ ಅತ್ಯಂತ ಹೇಯ ಮತ್ತು ಹೇಡಿತನದ ಕೃತ್ಯವಾಗಿದೆ. ಇದಕ್ಕೆ ಕಾರಣರಾದ ಉಗ್ರಗಾಮಿಗಳನ್ನು ಯಾವ ಮುಲಾಜೂ ಇಲ್ಲದೆ ಸದೆಬಡಿಯುವ ಕೆಲಸ ಆಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದ್ದಾರೆ. ಈ ದುರಂತದಲ್ಲಿ ರಾಜ್ಯದ ಇಬ್ಬರು ಅಸುನೀಗಿದ್ದಾರೆ. ಅವರ ಕುಟುಂಬಗಳಿಗೆ ಸರಕಾರ ಎಲ್ಲಾ ನೆರವು ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳಿಸಿಕೊಟ್ಟು, ತ್ವರಿತವಾಗಿ ಸ್ಪಂದಿಸಿದ್ದಾರೆ ಎಂದು ಪಾಟೀಲ ತಿಳಿಸಿದ್ದಾರೆ.
Next Story