ಕರ್ನೂಲ್ ಬಸ್ ದುರಂತ| ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರು ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು - ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ‌ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಪೋಸ್ಟ್‌ ಮಾಡಿದ್ದಾರೆ. 

Read More
Next Story