ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ

ಕರ್ನೂಲ್‌ ಬಸ್‌ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಬಳಿ ಅಪಘಾತಕ್ಕೀಡಾಗಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ದಾರುಣ ಘಟನೆ ತಿಳಿದು ಅಪಾರ ದುಃಖವಾಯಿತು. ಈ ದುರಂತದಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. 

ಈ ದುರಂತದಲ್ಲಿ ಕರ್ನಾಟಕದವರು ಇರುವ ಸಾಧ್ಯತೆ ಇದ್ದು ರಾಜ್ಯ ಸರ್ಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಈ ಕೂಡಲೇ ಸ್ಥಳೀಯ ಆಡಳಿತದೊಂದಿಗೆ ಕೈ ಜೋಡಿಸಿ ನೆರವು ನೀಡಲಿ ಹಾಗೂ ಮೃತರ ಕುಟುಂಬಕ್ಕೆ ಅಗತ್ಯ ಪರಿಹಾರ ಒದಗಿಸಲಿ ಎಂದು ಮನವಿ ಮಾಡಿದ್ದಾರೆ. 

Read More
Next Story