ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಗಳಿಗೆ ಸಿಎಂ ಚಂದ್ರಬಾಬು ನಾಯ್ಡು 'ಹೃತ್ಪೂರ್ವಕ ಸಂತಾಪ'
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕೃತ ಪ್ರವಾಸದ ನಿಮಿತ್ತ ದುಬೈನಲ್ಲಿರುವ ಮುಖ್ಯಮಂತ್ರಿಗಳು, ಜೀವಹಾನಿ ಬಗ್ಗೆ ಆಘಾತ ಮತ್ತು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.
ಈ ಕುರಿತು 'X' ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಅವರು,"ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಮತ್ತು ಪೀಡಿತ ಕುಟುಂಬಗಳಿಗೆ ಸರ್ಕಾರಿ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಾರೆ ಎಂದು ಅವರು ಬರೆದುಕೊಂಡಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

