ಮಳೆ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಿಜೆಪಿ ನಿಯೋಗ
x

ಮಳೆ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಿಜೆಪಿ ನಿಯೋಗ


ಬೆಂಗಳೂರಿನಲ್ಲಿ ಮಳೆ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ನಿಯೋಗ ಭೇಟಿ ನೀಡಿ, ಇಂದು ಪರಿಶೀಲನೆ ನಡೆಸಿತು. ಸಿಲ್ಕ್ ಬೋರ್ಡ್ ಜಂಕ್ಷನ್​ನಲ್ಲಿ ರಸ್ತೆಯಲ್ಲಿ ಹೆಚ್ಚು ನೀರು ಹರಿಯುತ್ತಿದ್ದು, ಇಲ್ಲಿಗೆ ಭೇಟಿ ನೀಡಿದ ಬಿಜೆಪಿ ನಾಯಕರು ಮಳೆ ಹಾನಿಗೆ ಕಾರಣಗಳು, ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿದರು. ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಬಿಜೆಪಿ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಸತೀಶ್ ರೆಡ್ಡಿ, ಸಿ. ಕೆ. ರಾಮಮೂರ್ತಿ ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

Read More
Next Story