ಹೊಸ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಹೆಸರಿಡಲು ಆರ್. ಅಶೋಕ್ ಸಲಹೆ
ಬೆಂಗಳೂರು ನಗರ ವಿಶ್ವ ವಿದ್ಯಾಲಯಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಹೆಸರಿಡುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಪ್ರಸ್ತಾಪ ಮಾಡಿದರು.
ಈ ವೇಳೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ನಮಗೇನು ತಕರಾರು ಇಲ್ಲ. ಹಳೆಯ ವಿಶ್ವ ವಿದ್ಯಾಲಯಕ್ಕೆ ಅವರ ಹೆಸರು ಏಕೆ ಇಡುತ್ತೀರಿ. ಹೊಸ ವಿಶ್ವವಿದ್ಯಾಲಯಕ್ಕೆ ಹೆಸರು ಇಡಿ ಎಂದು ಸಲಹೆ ನೀಡಿದರು.

Next Story