ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ - ಬಿಜೆಪಿ ತೀವ್ರ ಆಕ್ರೋಶ, ಹಲವು ಪ್ರಶ್ನೆಗಳನ್ನು ಮುಂದಿಟ್ಟು ಸವಾಲ್
ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶುಕ್ರವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಈ ಹಿನ್ನೆಲೆ ಬಿಜೆಪಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರೆ,ನೀವು ಇಂದು ಬೆಳಿಗ್ಗೆ ನಿಮ್ಮ ಪಕ್ಷ ಚುನಾವಣಾ ಆಯೋಗದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸುತ್ತಿದ್ದಿರಿ.
ರವರಿಗೆ ಶ್ರೀ @RahulGandhi ಲೋಕಸಭೆಯ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರೆ, ನೀವು ಇಂದು ಬೆಳಿಗ್ಗೆ ನಿಮ್ಮ ಪಕ್ಷ ಚುನಾವಣಾ ಆಯೋಗದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸುತ್ತಿದ್ದಿರಿ. ಯಾವುದೇ ವಿಷಯದ ಕುರಿತು ಪ್ರತಿಭಟಿಸುವ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ…
— BJP Karnataka (@BJP4Karnataka) August 8, 2025
ಯಾವುದೇ ವಿಷಯದ ಕುರಿತು ಪ್ರತಿಭಟಿಸುವ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ ಹೀಗಾಗಿ ನೀವು ಪ್ರತಿಭಟಿಸಲು ಸರ್ವ ಸ್ವತಂತ್ರರು. ಆದರೆ ಈ ಕೆಳಗಿನ ಪ್ರಶ್ನೆಗಳಿಗೆ ಮಾತ್ರ ನಿಮ್ಮಿಂದ ನೇರವಾದ ಹಾಗೂ ಸಮಂಜಸವಾದ ಉತ್ತರವನ್ನು ಬಯಸುತ್ತೇವೆ. ಏಕೆಂದರೆ ಈ ಪ್ರಶ್ನೆಗಳು ಕರ್ನಾಟಕದ ಜನತೆಯದ್ದಾಗಿವೆ. ಬಹಳಷ್ಟು ದಿನಗಳಿಂದ ಕನ್ನಡಿಗರು ಈ ಪ್ರಶ್ನೆಗಳಿಗೆ ನಿಮ್ಮಿಂದ ಉತ್ತರವನ್ನು ಬಯಸುತ್ತಿದ್ದು, ನೀವು ಈ ಪ್ರಶ್ನೆಗಳಿಗೆ ಉತ್ತರಿಸುತ್ತಿರಾ ಎಂದು ನಾವು ನಂಬಿದ್ದೇವೆ ಎಂದು ಕಿಡಿಕಾರಿದ್ದಾರೆ.