ಹಿರಿಯ ತಾಂತ್ರಿಕ ಸಹಾಯಕ ಮತ್ತು ತಂತ್ರಜ್ಞ 561 ಹುದ್ದೆಗಳಿದ್ದು, ಟೆಕ್ನಿಷಿಯನ್ 203 ಹುದ್ದೆಗಳು ಸೇರಿದಂತೆ ಒಟ್ಟು 764 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜನವರಿ 1 ಕೊನೆಯ ದಿನಾಂಕವಾಗಿದೆ.

Click the Play button to hear this message in audio format

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಗೆ ಸೇರಬಯಸುವ ಯುವಕ ಯುವತಿಯರಿಗೆ ಸುವರ್ಣ ಅವಕಾಶವೊಂದು ದೊರೆತಿದ್ದು, ಮಾನ್ಯತೆ ಪಡೆದ ಸಂಸ್ಥೆಯಿಂದ ವಿಜ್ಞಾನದಲ್ಲಿ ಪದವಿ (B.Sc) ಅಥವಾ ಎಂಜಿನಿಯರಿಂಗ್, ಕಂಪ್ಯೂಟರ್ ವಿಜ್ಞಾನ ಹಾಗೂ ಅನ್ಯ ವಿಷಯಗಳಲ್ಲಿ ಡಿಪ್ಲೊಮಾ, ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪಾಸ್‌ ಆಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಹಿರಿಯ ತಾಂತ್ರಿಕ ಸಹಾಯಕ ಮತ್ತು ತಂತ್ರಜ್ಞ 561 ಹುದ್ದೆಗಳಿದ್ದು, ಟೆಕ್ನಿಷಿಯನ್ 203 ಹುದ್ದೆಗಳು ಸೇರಿದಂತೆ ಒಟ್ಟು 764 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜನವರಿ 1 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ

ಹಿರಿಯ ತಾಂತ್ರಿಕ ಸಹಾಯಕ ಹಾಗೂ ತಂತ್ರಜ್ಞ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ವಿಜ್ಞಾನದಲ್ಲಿ ಪದವಿ (B.Sc) ಅಥವಾ ಎಂಜಿನಿಯರಿಂಗ್, ಕಂಪ್ಯೂಟರ್ ವಿಜ್ಞಾನ ಹಾಗೂ ಅನ್ಯ ವಿಷಯಗಳಲ್ಲಿ ಡಿಪ್ಲೊಮಾ ಪಡೆದಿರಬೇಕು. ಟಿಕ್ನಿಷಿಯನ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪೂರೈಸಿರಬೇಕು.

ವೇತನ ಮತ್ತು ವಯೋಮಿತಿ

ಹಿರಿಯ ತಾಂತ್ರಿಕ ಸಹಾಯಕ ಹಾಗೂ ತಂತ್ರಜ್ಞ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 35,400 – 1,12,400 ರೂಪಾಯಿವರೆಗೂ ಸಂಬಳ ನಿಗದಿಪಡಿಸಲಾಗಿದ್ದು, ಟೆಕ್ನಿಷಿಯನ್ ಹುದ್ದೆಗಳಿಗೆ 19,900 – 63,200 ರೂಪಾಯಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಹಿರಿಯ ತಾಂತ್ರಿಕ ಸಹಾಯಕ ಹಾಗೂ ಟೆಕ್ನಿಷಿಯನ್‌ ಹುದ್ದೆಗಳಿಗೆ 150 ಅಂಕ ಹಾಗೂ 120 ಅಂಕದ ಎರಡು ಪ್ರಶ್ನೆಪತ್ರಿಕೆಗಳಿದ್ದು, ಸಾಮಾನ್ಯ ವಿಜ್ಞಾನ, ಸಾಮಾನ್ಯ ಇಂಗ್ಲಿಷ್, ಪರಿಮಾಣಾತ್ಮಕ ಸಾಮರ್ಥ್ಯ, ಸಾಮಾನ್ಯ ಗಣಿತ, ಸಾಮಾನ್ಯ ಜ್ಞಾನ, ತಾರ್ಕಿಕತೆ ಮತ್ತು ನಿರ್ದಿಷ್ಟವಾದ ಪತ್ರಿಕೆ ನಿಗದಿಪಡಿಸಲಾಗಿದ್ದು, ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳ ಋಣಾತ್ಮಕ ಅಂಕಗಳಿವೆ. ಐಟಿಐ ಮಟ್ಟದ ಪ್ರಾಯೋಗಿಕ ಕೌಶಲ್ಯ ಪರೀಕ್ಷೆ ಒಳಗೊಂಡಿರುತ್ತದೆ.

ಅರ್ಜಿ ಶುಲ್ಕ

ತಾಂತ್ರಿಕ ಸಹಾಯಕರು ಹಾಗೂ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 750 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 500 ರೂ. ನಿಗದಿಪಡಿಸಲಾಗಿದೆ.ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ 500 ರೂ. ವಾಪಸ್‌ ನೀಡಲಾಗುವುದು ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿ ತಿದ್ದುಪಡಿಗೆ ಅವಕಾಶ

ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 1 ಕೊನೆಯ ದಿನಾಂಕವಾಗಿದ್ದು, ಜ.3 ಶುಲ್ಕಪಾವತಿಗೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವಲ್ಲಿ ಯಾವುದೇ ತಪ್ಪುಗಳಾಗಿದ್ದಲ್ಲಿ ಅರ್ಜಿ ತಿದ್ದುಪಡಿ ಮಾಡಲು ಜ.4-6 ರವರೆಗೆ ಅವಕಾಶ ನೀಡಲಾಗಿದೆ.

Next Story