ಗಾಯತ್ರಿ ನಗರದಲ್ಲಿ ಅಗ್ನಿ ಅವಘಡ: ಗೃಹಿಣಿ ದುರ್ಮರಣ
x

ಬೆಂಗಳೂರಿನ ಗಾಯತ್ರಿ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸಂಭವಿಸಿದೆ.  

ಗಾಯತ್ರಿ ನಗರದಲ್ಲಿ ಅಗ್ನಿ ಅವಘಡ: ಗೃಹಿಣಿ ದುರ್ಮರಣ

ಬೆಂಗಳೂರಿನ ಗಾಯತ್ರಿ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗೃಹಿಣಿ ಸವಿತಾ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದಿಂದ ಮೂವರ ರಕ್ಷಣೆ ಮಾಡಲಾಗಿದೆ.


Click the Play button to hear this message in audio format

ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಅವರ ಪತ್ನಿ ಸವಿತಾ (53) ಅವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಡೆದಿದೆ.

ಮನೆಯ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿದ್ದ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಸದ್ಯ ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಇತ್ತೀಚೆಗೆ ಬೆಂಗಳೂರಿನ ವಾಣಿಜ್ಯ ಪ್ರದೇಶವಾದ ಚಿಕ್ಕಪೇಟೆ ಮತ್ತು ಕುಂಬಾರಪೇಟೆಯ ಲಕ್ಷ್ಮಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಶಾರ್ಟ್ ಸರ್ಕಿಟ್‌ನಿಂದಾಗಿ ನೆಲಮಹಡಿಯ ಹಾರ್ಡ್‌ವೇರ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪ್ಲಾಸ್ಟಿಕ್ ವಸ್ತುಗಳು ಮತ್ತು ಬಟ್ಟೆ ಅಂಗಡಿಗಳಿದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿ ಸುಮಾರು 60ಕ್ಕೂ ಹೆಚ್ಚು ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದವು.. ಕಿರಿದಾದ ರಸ್ತೆಗಳ ಕಾರಣದಿಂದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಹರಸಾಹಸ ಪಡಬೇಕಾಯಿತು ಮತ್ತು ಸುಮಾರು 15ಕ್ಕೂ ಹೆಚ್ಚು ವಾಹನಗಳು ಸತತ 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಬೆಂಗಳೂರಿನ ಬಾಣಸವಾಡಿ ಸಮೀಪದ ಕಲ್ಕೆರೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಕಲ್ಕೆರೆ ಸಮೀಪವಿರುವ ಫರ್ನಿಚರ್ ಗೋಡೌನ್‌ವೊಂದರಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಅಲ್ಲಿ ಮರದ ಫರ್ನಿಚರ್ ಮತ್ತು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿದ್ದ ಕಾರಣ, ಬೆಂಕಿ ಕ್ಷಣಾರ್ಧದಲ್ಲಿ ಪಕ್ಕದ ಮೂರು ಗೋಡೌನ್‌ಗಳಿಗೆ ವ್ಯಾಪಿಸಿತು. ನೋಡನೋಡುತ್ತಿದ್ದಂತೆಯೇ ನಾಲ್ಕು ಗೋಡೌನ್‌ಗಳು ಧಗಧಗ ಉರಿಯಲಾರಂಭಿಸಿದವು. ಫರ್ನಿಚರ್ ಶೀಟ್ ಫ್ಯಾಕ್ಟರಿ ಹಾಗೂ ಪೊರಕೆ ಗೋಡೌನ್ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಭಸ್ಮವಾಗಿತ್ತು.

Read More
Next Story