
ಮೃತ ಯುವತಿ ತನುಶ್ರೀ
Puc Result | ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ಆತ್ಮಹತ್ಯೆ; ತನಿಖೆಗೆ ಸಂಬಂಧಿಕರ ಆಗ್ರಹ
ತನುಶ್ರೀ ಸಾವು ನಾನಾ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ತಾಯಿಯ ಅನೈತಿಕ ಸಂಬಂಧಕ್ಕೆ ಅಪ್ರಾಪ್ತ ಮಗಳ ಬಲಿಯಾಗಿದ್ದಾಳೆ. ಪಿಯುಸಿ ರಿಸಲ್ಟ್ ದಿನವೇ ಮಗಳಿಗೆ ಮುಹೂರ್ತವಿಟ್ಟು ಕೊಲೆ ಮಾಡಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ ಮನನೊಂದ 17 ವರ್ಷದ ವಿದ್ಯಾರ್ಥಿನಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿರುವ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ತನುಶ್ರೀ ಎಂದು ಗುರುತಿಸಲಾಗಿದೆ. ಈಕೆ ನಗರದ ಖಾಸಗಿ ಕಾಲೇಜೊಂದರಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಮೃತ ತನುಶ್ರೀ ಖಾಸಗಿ ಕಾಲೇಜೊಂದರಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದರು. ಗುರುವಾರ ಫಲಿತಾಂಶ ಬಂದಾಗ ತನುಶ್ರೀ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಅವರ ತಾಯಿ ಆಶಾ ಕೆಲಸಕ್ಕೆ ಹೋಗಿದ್ದರಿಂದ ತನುಶ್ರೀ ಒಬ್ಬರೇ ಇದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಫಲಿತಾಂಶದ ವಿಚಾರವಾಗಿ ತನುಶ್ರೀ ತನ್ನ ಸ್ನೇಹಿತರಿಗೆ ಕರೆ ಮಾಡಿ ಮಾತನಾಡಿದ್ದರು. ಅವರು ಒಬ್ಬರೇ ಇದ್ದಿದ್ದರಿಂದ ಸ್ನೇಹಿತರು ತಮ್ಮ ಬಳಿ ಬರುವಂತೆ ಒತ್ತಾಯಿಸಿದ್ದರು. ಆದರೆ, ಬಳಿಕ ತನುಶ್ರೀ ಕರೆ ಹಾಗೂ ಮೆಸೇಜ್‌ಗಳಿಗೆ ಪ್ರತಿಕ್ರಿಯಿಸಿಲ್ಲ. ಅನುಮಾನಗೊಂಡ ಸ್ನೇಹಿತರು ಮನೆಗೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತನುಶ್ರೀ ಸಾವಿನ ಹಿಂದೆ ಅನುಮಾನಗಳು...
ತನುಶ್ರೀ ಸಾವು ನಾನಾ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ತಾಯಿಯ ಅನೈತಿಕ ಸಂಬಂಧಕ್ಕೆ ಅಪ್ರಾಪ್ತ ಮಗಳ ಬಲಿಯಾಗಿದ್ದಾಳೆ. ಪಿಯುಸಿ ರಿಸಲ್ಟ್ ದಿನವೇ ಮಗಳಿಗೆ ಮುಹೂರ್ತವಿಟ್ಟು ಕೊಲೆ ಮಾಡಿದ್ದಾರೆ ಎಂದು ತನುಶ್ರೀ ತಂದೆಯ ಕಡೆಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ಹಿಂದೆ ತನುಶ್ರೀ ತಂದೆ ಕೂಡ ಹೆಂಡ್ತಿಯ ಅನೈತಿಕ ಸಂಬಂಧ ಗೊತ್ತಾಗಿಯೇ ಮೃತಪಟ್ಟಿದ್ದರು ಎಂದು ಆರೋಪಿಸಲಾಗಿದೆ.
(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

