
ಪ್ರೀತಿಸಿ ಕೈಕೊಟ್ಟ ಯುವತಿ: ಬಾಡಿ ಬಿಲ್ಡರ್ ನೇಣಿಗೆ ಶರಣು
ಕಿರಣ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ನಿಶ್ಚಯವಾಗಿದೆ. ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆ ತೋರಿಸಿ ಪ್ರೀತಿ ನಿರಾಕರಿಸಿದ್ದಳು.
ಪ್ರೇಯಸಿ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಡಿ ಬಿಲ್ಡರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದಿದೆ.
ಕಿರಣ್(26) ಆತ್ಮಹತ್ಯೆಗೆ ಶರಣಾದ ಬಾಡಿ ಬಿಲ್ಡರ್. ಕಿರಣ್ 3 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಆದರೆ ಯುವತಿಗೆ ಬೇರೆ ಯುವಕನ ಜತೆ ಮದುವೆ ನಿಶ್ಚಯವಾದ ಕಾರಣ ಮನನೊಂದು ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಯುವತಿ ಹಾಗೂ ಆಕೆಯ ತಾಯಿಯೇ ಕಾರಣ ಎಂದು ಬರೆದಿದ್ದಾರೆ.
ಕಿರಣ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ನಿಶ್ಚಯವಾಗಿದೆ. ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆ ತೋರಿಸಿ ಪ್ರೀತಿ ನಿರಾಕರಿಸಿದ್ದಳು.
ಇದರಿಂದ ಮನನೊಂದ ಕಿರಣ್, ನೇರವಾಗಿ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ತಾಯಿಯಿಂದ ಬಿಳಿ ಹಾಳೆ ಹಾಗೂ ಪೆನ್ ಕೇಳಿದ್ದ. ಅನುಮಾನಗೊಂಡ ತಾಯಿ ಬಿಳಿ ಹಾಳೆ ಏಕೆ ಎಂದು ಪ್ರಶ್ನಿಸಿದಾಗ, ಹೆದರಬೇಡಮ್ಮ ಫೈನಾನ್ಸ್ ಲೆಕ್ಕ ಬರೀತಿನಿ ಎಂದು ಕಿರಣ್ ಹೇಳಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀಲೇಔಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕುಟುಂಬಸ್ಥರ ದೂರಿನ ಮೇರೆಗೆ ಮಹಾಲಕ್ಷ್ಮಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

