
ಟ್ವೀಟ್ ಮಾಡುವ ಮೂಲಕ ಪಂದ್ಯಕ್ಕೂ ಮುನ್ನವೇ ಆರ್‌ಸಿಬಿ ತಂಡಕ್ಕೆ ಸ್ಫೂರ್ತಿ ತುಂಬಿದ್ದಾರೆ.
ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಕಾರು ಭೀಕರ ಅಪಘಾತ: ದಂಪತಿ ಸೇರಿ 4 ವರ್ಷದ ಮಗು ಸಾವು
ಪಲಮನೇರ್‌ನಿಂದ ಚಿತ್ತೂರಿಗೆ ತೆರಳುತ್ತಿದ್ದ ಬಸ್ಸೊಂದು ಹೆದ್ದಾರಿಯ ಬಂಗಾರುಪಾಳ್ಯಂ ಬಳಿ ನಿಂತಿತ್ತು ಎನ್ನಲಾಗಿದೆ. ಇದೇ ಮಾರ್ಗವಾಗಿ ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ, ನಿಂತಿದ್ದ ಬಸ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ.
ಬೆಂಗಳೂರಿನಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ದಂಪತಿ ಮತ್ತು ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಕಾರು ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು-ನಾಯ್ಡುಪೇಟೆ ರಾಷ್ಟ್ರೀಯ ಹೆದ್ದಾರಿಯ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಸಮೀಪದ ಪಲಮಕುಲಪಲ್ಲಿ ಬಳಿ ಈ ಭೀಕರ ದುರಂತ ಸಂಭವಿಸಿದೆ. ಮಧ್ಯಾಹ್ನ 12 ಗಂಟೆಗೆ ತಿರುಪತಿಯಲ್ಲಿ ದೇವರ ದರ್ಶನಕ್ಕೆ ಟಿಕೆಟ್ ಪಡೆದುಕೊಂಡಿದ್ದ ಕುಟುಂಬ, ದರ್ಶನಕ್ಕೆ ತೆರಳುವ ಮುನ್ನವೇ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದೆ.
ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಅಪ್ಪಳಿಸಿದ ಕಾರು
ಪಲಮನೇರ್‌ನಿಂದ ಚಿತ್ತೂರಿಗೆ ತೆರಳುತ್ತಿದ್ದ ಬಸ್ಸೊಂದು ಹೆದ್ದಾರಿಯ ಬಂಗಾರುಪಾಳ್ಯಂ ಬಳಿ ನಿಂತಿತ್ತು ಎನ್ನಲಾಗಿದೆ. ಇದೇ ಮಾರ್ಗವಾಗಿ ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ, ನಿಂತಿದ್ದ ಬಸ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ದಂಪತಿ ಹಾಗೂ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣವಾಗಿ ಬಸ್‌ನ ಹಿಂಭಾಗಕ್ಕೆ ಸಿಲುಕಿಕೊಂಡಿದ್ದರಿಂದ, ಪೊಲೀಸರು ಜೆಸಿಬಿ (JCB) ಸಹಾಯದಿಂದ ವಾಹನವನ್ನು ಹೊರತೆಗೆದು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ?
ಪ್ರಾಥಮಿಕ ವರದಿಗಳ ಪ್ರಕಾರ, ಕಾರಿನ ಅತಿ ವೇಗದ ಚಾಲನೆಯೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಪೊಲೀಸರು ಅವರ ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ ಮತ್ತು ಘಟನೆ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

