ಐಟಿ ದಾಳಿ ನಡೆಯುತ್ತಿರುವಾಗಲೇ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
x

ಐಟಿ ದಾಳಿ ನಡೆಯುತ್ತಿರುವಾಗಲೇ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಐಟಿ ದಾಳಿಯಿಂದ ಅವರು ಒತ್ತಡಕ್ಕೆ ಒಳಗಾಗಿದ್ದರು. ಇದೇ ಕಾರಣದಿಂದ ಸಿ.ಜೆ. ರಾಯ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.


Click the Play button to hear this message in audio format

ಪ್ರಸಿದ್ಧ ರಿಯಲ್ ಎಸ್ಟೇಟ್ ಕಂಪನಿಯಾಗಿರುವ ಕಾನ್ಫಿಡೆಂಟ್ ಗ್ರೂಪ್​​ನ ಮಾಲೀಕ ಸಿ.ಜೆ. ರಾಯ್ ಅವರು ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಿರುವ ತಮ್ಮ ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶುಕ್ರವಾರ ((ಜನವರಿ 30) ಸಂಜೆ ನಡೆದಿದ್ದು, ಉದ್ಯಮ ವಲಯದಲ್ಲಿ ಭಾರಿ ಆಘಾತವನ್ನುಂಟುಮಾಡಿದೆ. ಆದಾಯ ತೆರಿಗೆ ಇಲಾಖೆಯ (IT) ಅಧಿಕಾರಿಗಳು ವಿಚಾರಣೆ ಅಥವಾ ದಾಳಿ ನಡೆಸುತ್ತಿದ್ದ ಸಂದರ್ಭದಲ್ಲೇ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಿಚ್ಮಂಡ್ ರಸ್ತೆ ಬಳಿ ಇರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನದಿಂದಲೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಒತ್ತಡಕ್ಕೆ ಒಳಗಾದ ಸಿ.ಜೆ. ರಾಯ್ ಅವರು ತಮ್ಮ ಬಳಿಯಿದ್ದ ಪಿಸ್ತೂಲಿನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ.

ತಕ್ಷಣವೇ ಅವರನ್ನು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಾರಾಯಣ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೇರಳ ಮೂಲದ ಉದ್ಯಮಿಯಾಗಿರುವ ಸಿ.ಜೆ. ರಾಯ್ ಅವರ ಸಂಸ್ಥೆಯ ಮೇಲೆ ಈ ಹಿಂದೆಯೂ ಐಟಿ ದಾಳಿಗಳು ನಡೆದಿದ್ದವು. ಸಂಸ್ಥೆಯ ತೆರಿಗೆ ವ್ಯವಹಾರಗಳಿಗೆ ಸಂಬಂಧಿಸಿದಂತೆ ಅವರು ಇಲಾಖೆಯೊಂದಿಗೆ ಕಾನೂನು ಹೋರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಇಂದು ಮತ್ತೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ಅಥವಾ ವಿಚಾರಣೆಗಾಗಿ ಕಚೇರಿಗೆ ಬಂದಿದ್ದ ವೇಳೆ ಈ ದುರಂತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಹುಮುಖಿ ಉದ್ಯಮಿ

ಸಿ.ಜೆ. ರಾಯ್ ಅವರು ಕೇವಲ ರಿಯಲ್ ಎಸ್ಟೇಟ್ ಮಾತ್ರವಲ್ಲದೆ, ಆತಿಥ್ಯ, ಶಿಕ್ಷಣ ಮತ್ತು ಮನರಂಜನಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದರು. ರಿಯಾಲಿಟಿ ಶೋಗಳಿಗೆ ಪ್ರಾಯೋಜಕರಾಗಿಯೂ ಅವರು ಚಿರಪರಿಚಿತರಾಗಿದ್ದರು. ಬೆಂಗಳೂರು ಮತ್ತು ಕೇರಳದಲ್ಲಿ ಹಲವಾರು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದ ಅವರು, ದುಬೈ ಮಾರುಕಟ್ಟೆಗೂ ತಮ್ಮ ಉದ್ಯಮವನ್ನು ವಿಸ್ತರಿಸಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.

(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್‌: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

Read More
Next Story