
ಮೃತ ರಾಯ್ ಸಿ.ಜೆ.
ಕಾನ್ಫಿಡೆಂಟ್ ಗ್ರೂಪ್ ರಾಯ್ ಸಿ.ಜೆ. ಆತ್ಮಹತ್ಯೆ; 3 ದಿನಗಳಿಂದ ಐಟಿ ತನಿಖೆ ನಡೆಯುತ್ತಿತ್ತು ಎಂದ ಸಂಬಂಧಿ
ಕಳೆದ ಮೂರು ದಿನಗಳಿಂದ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಯಲ್ಲಿ ತನಿಖೆ ನಡೆಸುತ್ತಿದ್ದರು ಎಂದು ಸಂಬಂಧಿಯೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಕಾನ್ಫಿಡೆಂಟ್ ಗ್ರೂಪ್‌ನ ರಾಯ್ ಸಿ ಜೆ ಅವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರ ಸಂಬಂಧಿಯೊಬ್ಬರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಯಲ್ಲಿ ತನಿಖೆ ನಡೆಸುತ್ತಿದ್ದರು ಎಂದು ಅವರು ಸ್ಥಳೀಯ ಮಾಧ್ಯಮವೊಂದಕ್ಕೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಸಂಬಂಧಿಯು. ರಾಯ್ ಸಿ ಜೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ, ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಐಟಿ ತನಿಖೆಯ ನೇತೃತ್ವವನ್ನು ಕೇರಳ ಮೂಲದ ಅಡಿಷನಲ್ ಕಮಿಷನರ್ ಕೃಷ್ಣಪ್ರಸಾದ್ ಎಂಬುವವರು ವಹಿಸಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ.
ಒಂದು ತಿಂಗಳ ಹಿಂದೆಯೂ ನಡೆದಿತ್ತು ದಾಳಿ
ಕೇವಲ ಕಳೆದ ಮೂರು ದಿನಗಳಿಂದ ಮಾತ್ರವಲ್ಲದೇ, ಸುಮಾರು ಒಂದು ತಿಂಗಳ ಹಿಂದೆಯೂ ಇವರ ಮೇಲೆ ಐಟಿ ದಾಳಿ ನಡೆದಿತ್ತು ಎಂಬ ಮಾಹಿತಿಯನ್ನೂ ಅವರು ಬಹಿರಂಗಪಡಿಸಿದ್ದಾರೆ. ಆದರೆ, ರಾಯ್ ಅವರಿಗೆ ನಿರ್ದಿಷ್ಟವಾಗಿ ಯಾವ ಸಮಸ್ಯೆ ಇತ್ತು ಅಥವಾ ಅಧಿಕಾರಿಗಳು ತನಿಖೆಯ ವೇಳೆ ಏನನ್ನು ಪ್ರಶ್ನಿಸುತ್ತಿದ್ದರು ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.
"ನಾನು ಥಾಯ್ಲೆಂಡ್ನ ಫುಕೆಟ್‌ನಿಂದ ಬರುತ್ತಿದ್ದು, ಸದ್ಯ ಎಮಿಗ್ರೇಷನ್‌ನಲ್ಲಿದ್ದೇನೆ. ಹೊರಗೆ ಬಂದ ನಂತರ ಲ್ಯಾಂಡ್‌ಲೈನ್ ಮೂಲಕ ಮಾತನಾಡುತ್ತೇನೆ," ಎಂದು ಆ ವ್ಯಕ್ತಿ ವರದಿಗಾರರಿಗೆ ತಿಳಿಸಿದ್ದಾರೆ.
(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

