
ಧಾರವಾಡದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ; ಕಾರಣ ನಿಗೂಢ
ಧಾರವಾಡದ ಕುಮಾರೇಶ್ವರ ನಗರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಠಲ್ ಜೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಅರಣ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರಾಗಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ವಿಠಲ್ ಜೋನಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕಳೆದ ರಾತ್ರಿ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಠಲ್ ಜೋನಿ ಅವರು ಈ ಹಿಂದೆ ಅರಣ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿದ ಬಳಿಕ ಮೃತದೇಹವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story
