
ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆ
ಧಾರವಾಡ| ಯೂತ್ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ
ಧಾರವಾಡದ ಹಾಶ್ಮಿನಗರದಲ್ಲಿ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಪೊಲೀಸರು ಸದ್ಯ ಹಂತಕರಿಗಾಗಿ ಶೋಧ ನಡೆಸುತ್ತಿದ್ದಾರೆ.
ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅತಿ ಕ್ರೂರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡದಲ್ಲಿ ಹಾಶ್ಮಿನಗರದಲ್ಲಿ ನಡೆದಿದೆ.
ಧಾರವಾಡದ ಹಾಶ್ಮಿನಗರದಲ್ಲಿರುವ ಫೈರೋಜ್ ಪಠಾಣ್ ಅವರ ಮನೆಗೆ ಶನಿವಾರ ಬೆಳ್ಳಂಬೆಳಗ್ಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯವರ ಕಣ್ಣೆದುರೇ ಫೈರೋಜ್ ಅವರ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಇರಿದು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಫೈರೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಧಾರವಾಡ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹಂತಕರ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಫೈರೋಜ್ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಬೆಂಬಲಿಗರು ಮತ್ತು ಕುಟುಂಬಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆಗೆ ಹಳೆಯ ದ್ವೇಷ ಕಾರಣವೇ ಅಥವಾ ರಾಜಕೀಯ ಪ್ರೇರಿತವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಾಗಿದೆ.

