ಉಡುಪಿಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ; ಉಡುಪಿಯಲ್ಲಿ ಮತ್ತೊಬ್ಬನ ಬಂಧನ
x

ಬಂಧಿತನನ್ನು ಪಶ್ವಿಮ ಬಂಗಾಳದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. 

ಉಡುಪಿಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ; ಉಡುಪಿಯಲ್ಲಿ ಮತ್ತೊಬ್ಬನ ಬಂಧನ

ಬಂಧಿತನನ್ನು ಪಶ್ಚಿಮ ಬಂಗಾಳದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದ್ದು, ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ.


Click the Play button to hear this message in audio format

ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಈ ಜಾಲದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಪಶ್ಚಿಮ ಬಂಗಾಳದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದ್ದು, ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ

ಮಲ್ಪೆ ಬಂದರಿನಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲವು ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆ, ತಾಂತ್ರಿಕ ವಿನ್ಯಾಸ ಹಾಗೂ ಇತರೆ ಗೋಪ್ಯ ಮಾಹಿತಿಯನ್ನು ವಾಟ್ಸ್‌ಆಪ್‌ ಮತ್ತು ಫೇಸ್‌ಬುಕ್‌ ಮೂಲಕ ಪಾಕಿಸ್ತಾನದ ಏಜೆಂಟ್‌ಗಳೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕಳೆದ ವರ್ಷದ ಅಂತ್ಯದಲ್ಲಿ ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಗುಜರಾತ್‌ ಮೂಲದ ಹಿರೇಂದ್ರ ಕುಮಾರ್‌, ಉತ್ತರ ಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು.

ಸಿಮ್ ಕಾರ್ಡ್ ನೀಡುತ್ತಿದ ಆರೋಪಿ

ಇನ್ನು ಈ ಆರೋಪಿಗಳಿಗೆ ಸಿಮ್‌ ಕಾರ್ಡ್‌ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಅನಧಿಕೃತ ವಿದೇಶಿ ಸಂಸ್ಥೆಗಳಿಗೆ ಸೋರಿಕೆ ಮಾಡಿದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಗುಜರಾತ್ ಮೂಲದ 34 ವರ್ಷದ ವ್ಯಕ್ತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದರು. ಕಾರ್ಕಳ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ಹರ್ಷ ಪ್ರಿಯಂವದ ನೇತೃತ್ವದ ತನಿಖಾ ತಂಡ ಕುಮಾರ್‌ನನ್ನು ಪತ್ತೆಹಚ್ಚಿತ್ತು. ಪೊಲೀಸ್ ವರದಿಗಳ ಪ್ರಕಾರ, ಕುಮಾರ್ ತನ್ನ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿ ಹಣದ ಬದಲಾಗಿ ಪ್ರಮುಖ ಆರೋಪಿಗೆ ನೀಡಿದ್ದ ಎನ್ನಲಾಗಿತ್ತು.

ಬಂಧಿತ ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಪಾಕಿಸ್ತಾನದ ಸಂಪರ್ಕದಲ್ಲಿದ್ದು, ಹಡಗುಗಳ ತಾಂತ್ರಿಕ ರಹಸ್ಯಗಳನ್ನು ರವಾನಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಪ್ರಕರಣದ ಸಂಚಿನ ಹಿಂದಿರುವ ಮತ್ತೊಬ್ಬ ಪ್ರಮುಖ ಆರೋಪಿ ಹಾಗೂ ಮಾಹಿತಿ ಹಂಚಿಕೆಗೆ ಬಳಸಲಾದ ಫೇಸ್‌ಬುಕ್‌ ಪೇಜ್ ಅಡ್ಮಿನ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆ ಕೊಚ್ಚಿನ್ ಶಿಪ್ ಯಾರ್ಡ್. ಇದು ನೌಕಾಪಡೆಗೆ ಮಾತ್ರವಲ್ಲದೆ, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದೆ. ಸಂಸ್ಥೆಯ ಪ್ರಧಾನ ಕಚೇರಿ ಕೇರಳದಲ್ಲಿದೆ.

Read More
Next Story