ಮಂಗಳೂರು|ರೈಲ್ವೆ ಹಳಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ನೈತಿಕ ಪೊಲೀಸ್‌ಗಿರಿ
x

ಬಂಧಿತ ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಮಂಗಳೂರು|ರೈಲ್ವೆ ಹಳಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ನೈತಿಕ ಪೊಲೀಸ್‌ಗಿರಿ

ಬಂಧಿತ ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


Click the Play button to hear this message in audio format

ಮಂಗಳೂರಿನ ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ರೈಲ್ವೆ ಹಳಿಯ ಬಳಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ತಂದೆ ಮತ್ತು ಮಗ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ವರದಿಯಾಗಿದೆ. ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬುವವರು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ವಿಡಿಯೋ ಚಿತ್ರೀಕರಿಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಈ ಆರೋಪಿಗಳು ಬಾಲಕನ ವಿರುದ್ಧ ಜಾತಿ ನಿಂದನೆ ಮಾಡಿದ್ದು, ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಮಾನಹಾನಿಗೆ ಯತ್ನಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣವೇ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂತ್ರಸ್ತ ವಿದ್ಯಾರ್ಥಿಗಳು ನೀಡಿದ ದೂರಿನ ಆಧಾರದ ಮೇಲೆ ಸ್ಟೀವನ್ ಮೊಂತೇರೋ ಮತ್ತು ಅವಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಅಟ್ರಾಸಿಟಿ (SC/ST Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಸದ್ಯ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಬೆಂಗಳೂರಿನಿಂದ ಖಾಸಗಿ ಎಸಿ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವ ಜೋಡಿಯೊಂದಕ್ಕೆ ಬಸ್ ನಿರ್ವಾಹಕನಿಂದ ನೈತಿಕ ಪೊಲೀಸ್‌ಗಿರಿ ನಡೆದಿರುವ ಘಟನೆ ನಡೆದಿದೆ. ಸ್ಲೀಪರ್ ಬರ್ತ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಿದ್ದ ಈ ಜೋಡಿ, ಪ್ರಯಾಣದ ವೇಳೆ ಒಂದು ಬರ್ತ್‌ನಲ್ಲಿ ಒಟ್ಟಿಗೆ ಕುಳಿತಿದ್ದನ್ನು ಕಂಡು ನಿರ್ವಾಹಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಯಾವುದೇ ನಿಯಮಗಳ ಉಲ್ಲಂಘನೆಯಾಗದಿದ್ದರೂ ಸಹ, ಕೂಡಲೇ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ತಾಕೀತು ಮಾಡಿದ ಆತ, ಪೋಷಕರಿಗೆ ಕರೆ ಮಾಡುವ ಮತ್ತು ಪೊಲೀಸ್ ಠಾಣೆಗೆ ಕರೆದೊಯ್ಯುವ ಬೆದರಿಕೆ ಹಾಕಿದ್ದಾನೆ ಎಂದು ಯುವಕ ರೆಡ್ಡಿಟ್‌ನಲ್ಲಿ ಅಳಲು ತೋಡಿಕೊಂಡಿದ್ದಾನೆ.

ಸಾರ್ವಜನಿಕವಾಗಿ ದೊಡ್ಡ ರಂಪಾಟವಾಗಬಾರದೆಂಬ ಕಾರಣಕ್ಕೆ ಆ ಕ್ಷಣಕ್ಕೆ ಇಬ್ಬರೂ ಸುಮ್ಮನಾಗಿ ಪ್ರತ್ಯೇಕವಾಗಿ ಕುಳಿತುಕೊಂಡರೂ, ಈ ಕಹಿ ಅನುಭವವು ಬಸ್ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಧಿಕೃತವಾಗಿ ಟಿಕೆಟ್ ಹಣ ಪಾವತಿಸಿ, ಇತರ ಪ್ರಯಾಣಿಕರಿಗೆ ಯಾವುದೇ ತೊಂದರೆ ನೀಡದಿದ್ದರೂ ನಿರ್ವಾಹಕ ಈ ರೀತಿ ವರ್ತಿಸಿದ್ದು ಎಷ್ಟು ಸರಿ. ಸಾರಿಗೆ ಸಂಸ್ಥೆಗಳಲ್ಲಿ ಪ್ರಯಾಣಿಕರ ಆಸನ ಹಂಚಿಕೆಯ ಬಗ್ಗೆ ಅಥವಾ ಒಟ್ಟಿಗೆ ಕುಳಿತುಕೊಳ್ಳುವ ಬಗ್ಗೆ ಇಂತಹ ಯಾವುದೇ ಕಟ್ಟುನಿಟ್ಟಿನ ಲಿಖಿತ ನಿಯಮಗಳಿಲ್ಲದಿದ್ದರೂ, ಸಿಬ್ಬಂದಿಯ ಈ ರೀತಿಯ ಹಸ್ತಕ್ಷೇಪವು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಆತ ಬರೆದುಕೊಂಡಿದ್ದ.

Read More
Next Story