Pro-Hindu activist Puneeth Kerehalli arrested for making derogatory remarks against clerics
x

ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು (ಸಾಂದರ್ಭಿಕ ಚಿತ್ರ)

ಮೌಲ್ವಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ: 'ರಾಷ್ಟ್ರಪಡೆ' ಸಂಘಟನೆಯ ಪುನೀತ್ ಕೆರೆಹಳ್ಳಿ ಸೆರೆ

ಈ ಹಿಂದೆಯೂ ಪುನೀತ್ ಕೆರೆಹಳ್ಳಿಯ ವಿರುದ್ಧ ವಿವಿಧ ಆರೋಪಗಳ ಮೇಲೆ ಪ್ರಕರಣಗಳು ದಾಖಲಾಗಿದ್ದವು. ನಗರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಶೆಡ್‌ಗಳಿಗೆ ನುಗ್ಗಿ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿತ್ತು.


Click the Play button to hear this message in audio format

ಮೌಲ್ವಿಗಳ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ 'ರಾಷ್ಟ್ರಪಡೆ' ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರು ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ.

ಮೂಲಗಳ ಪ್ರಕಾರ, ಪುನೀತ್ ಕೆರೆಹಳ್ಳಿ ಅವರು ಹಾಸನದಲ್ಲಿ ತಮ್ಮ ಸಹೋದರನ ಮದುವೆ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದರು. ಈ ವಿಷಯ ತಿಳಿದ ಬೆಂಗಳೂರಿನ ಕೆ.ಎಸ್. ಲೇಔಟ್ ಠಾಣೆ ಪೊಲೀಸರು ತಕ್ಷಣವೇ ಹಾಸನಕ್ಕೆ ಧಾವಿಸಿ, ಮದುವೆ ಮನೆಯಲ್ಲಿದ್ದ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ಮುಸ್ಲಿಂ ಮುಖಂಡರಿಂದ ದೂರು

ಮೌಲ್ವಿಗಳ ಕುರಿತು ಪುನೀತ್ ಕೆರೆಹಳ್ಳಿ ಅವರು ನಿಂದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಕ್ತಾರ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಕರೆತಂದ ಬಳಿಕ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆಯನ್ನು ತೀವ್ರಗೊಳಿಸುವ ಸಾಧ್ಯತೆ ಇದೆ. ದೂರಿನಲ್ಲಿ ಉಲ್ಲೇಖಿಸಲಾಗಿರುವ ಅಂಶಗಳು ಹಾಗೂ ಅವರ ಹೇಳಿಕೆಗಳ ಬಗ್ಗೆ ಪೊಲೀಸರು ಸ್ಪಷ್ಟನೆ ಕೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಲವು ಪ್ರಕರಣಗಳು ದಾಖಲು

ಪುನೀತ್ ಕೆರೆಹಳ್ಳಿಯ ವಿರುದ್ಧ ಈ ಹಿಂದೆಯೂ ವಿವಿಧ ಆರೋಪಗಳ ಮೇಲೆ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಶೆಡ್‌ಗಳಿಗೆ ನುಗ್ಗಿ ದಾಖಲಾತಿ ಕೇಳಿ, ಅವರಿಗೆ ಬೆದರಿಕೆ ಹಾಕಿದ್ದ ಆರೋಪ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇವರನ್ನು ಬಂಧಿಸಲಾಗಿತ್ತು. ಇದೀಗ ಮೌಲ್ವಿಗಳನ್ನು ನಿಂದಿಸಿದ ಆರೋಪದಡಿ ಮತ್ತೊಮ್ಮೆ ಪೊಲೀಸರು ಇವರನ್ನು ಸದ್ಯ ಬಂಧನಕ್ಕೊಳಪಡಿಸಿದ್ದಾರೆ.

Read More
Next Story