2nd PUC Results 2026| ಇಂದು ದ್ವಿತೀಯ ಪಿಯುಸಿ ರಿಸಲ್ಟ್- ಫಲಿತಾಂಶ ನೋಡುವುದು ಹೇಗೆ?
x

2026ರ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಲಿದೆ. 

2nd PUC Results 2026| ಇಂದು ದ್ವಿತೀಯ ಪಿಯುಸಿ ರಿಸಲ್ಟ್- ಫಲಿತಾಂಶ ನೋಡುವುದು ಹೇಗೆ?

2026ರ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಅಪರಾಹ್ನ 3ಕ್ಕೆ ಪ್ರಕಟ. ಮಧು ಬಂಗಾರಪ್ಪ ಅವರಿಂದ ಅಧಿಕೃತ ಘೋಷಣೆ. ನಿಮ್ಮ ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ


Click the Play button to hear this message in audio format

2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಗುರುವಾರ 3 ಗಂಟೆಗೆ ಫಲಿತಾಂಶ ಹೊರಬೀಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹದು. ಮಧ್ಯಾಹ್ನ 3 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಲಿಂಕ್ ಲಭ್ಯವಿರಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಬಹುದು.

ಫಲಿತಾಂಶ ನೋಡುವುದು ಹೇಗೆ?

  • karresults.nic.in ಗೆ ಭೇಟಿ ನೀಡಿ
  • Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಪರೀಕ್ಷೆ ಅಂಕಪಟ್ಟಿ ಸಿಗಲಿದೆ
  • ಕರ್ನಾಟಕ ಒನ್ ಮೊಬೈಲ್ ಆ್ಯಪ್ ನಲ್ಲಿ ಕೂಡ ಮಾಹಿತಿ ಲಭ್ಯವಿದೆ
  • ವಿದ್ಯಾರ್ಥಿಗಳ ಮೊಬೈಲ್ ಗೆ SMS ಮೂಲಕವೂ ಮಾಹಿತಿ ರವಾನೆ

ಈ ವರ್ಷ ಪ್ರಥಮ ಬಾರಿಗೆ ಡಿಜಿಲಾಕರ್ ನಲ್ಲಿ ಕೂಡ ನೀಡಲಾಗುತ್ತಿದೆ. https://www.digilocker.govt.in ನಲ್ಲಿ ರಿಸಲ್ಟ್​​ ಲಭ್ಯವಿರಲಿದೆ. ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರಬಂದ ನಂತರ, ಸಂಜೆ 6 ಗಂಟೆ 15 ನಿಮಿಷಕ್ಕೆ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಫಲಿತಾಂಶದ ನಂತರ ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಈ ಸುದ್ದಿಗೋಷ್ಠಿ ಆಯೋಜನೆಯಾಗಿದೆ. ಈ ವರ್ಷ ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ನಡೆದಿದ್ದ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು 1217 ಕೇಂದ್ರಗಳಲ್ಲಿ ಹಾಜರಾಗಿದ್ದರು.

ಇಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳು ಮತ್ತು ಶೇಕಡಾವಾರು ವಿವರಗಳ ಜೊತೆಗೆ ಟಾಪರ್‌ಗಳ ಪಟ್ಟಿಯೂ ಲಭ್ಯವಿರುತ್ತದೆ. ಒಂದು ವೇಳೆ ನಿರೀಕ್ಷಿತ ಫಲಿತಾಂಶ ಬಾರದಿದ್ದರೆ ಅಥವಾ ಅನುತ್ತೀರ್ಣರಾದರೆ ವಿದ್ಯಾರ್ಥಿಗಳು ಧೃತಿಗೆಡಬೇಕಾದ ಅಗತ್ಯವಿಲ್ಲ. ಸರ್ಕಾರ ಜಾರಿಗೆ ತಂದಿರುವ ಹೊಸ ಮೂರು ಪರೀಕ್ಷೆಗಳ ವ್ಯವಸ್ಥೆಯಡಿ (Exam 1, 2, ಮತ್ತು 3) ಮತ್ತೆರಡು ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ.

Read More
Next Story