
ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು ಸೀಮಿತಗೊಳಿಸಲಾಗಿತ್ತು
ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ನಿಮಗೂ ಸಿಗಲಿದೆ ಉಚಿತ ಪಠ್ಯಪುಸ್ತಕ
ರಾಜ್ಯಾದ್ಯಂತ ಇರುವ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಲಾ (Arts), ವಾಣಿಜ್ಯ (Commerce) ಮತ್ತು ವಿಜ್ಞಾನ (Science) ವಿಭಾಗಗಳ ಲಕ್ಷಾಂತರ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ.
ರಾಜ್ಯ ಸರ್ಕಾರವು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಸರ್ಕಾರಿ ಪದವಿಪೂರ್ವ (PU) ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಿದೆ. 2026-27ನೇ ಶೈಕ್ಷಣಿಕ ಸಾಲಿನಿಂದಲೇ ಈ ಹೊಸ ಯೋಜನೆ ಜಾರಿಗೆ ಬರಲಿದೆ.
ಇದುವರೆಗೆ ಕೇವಲ 1 ರಿಂದ 10ನೇ ತರಗತಿಯವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು ಸೀಮಿತಗೊಳಿಸಲಾಗಿತ್ತು. ಇದೀಗ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಸೌಲಭ್ಯವನ್ನು ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ.
ರಾಜ್ಯಾದ್ಯಂತ ಇರುವ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಲಾ (Arts), ವಾಣಿಜ್ಯ (Commerce) ಮತ್ತು ವಿಜ್ಞಾನ (Science) ವಿಭಾಗಗಳ ಲಕ್ಷಾಂತರ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಮಹತ್ವದ ನಿರ್ಧಾರದಿಂದಾಗಿ ಗ್ರಾಮೀಣ ಭಾಗದ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಅನುಕೂಲವಾಗಲಿದ್ದು, ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

