
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2025-26ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2025- 26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆವರೆಗೆ ನಡೆಯಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
ಮೇ 18 - ಪ್ರಥಮ ಭಾಷೆ,
ಮೇ 19- ವಿಜ್ಞಾನ
ಮೇ 20 - ದ್ವೀತಿಯ ಭಾಷೆ,
ಮೇ 21- ಗಣಿತ,
ಮೇ 22- ರಂದು ತೃತೀಯ ಭಾಷೆ
ಮೇ 23 - ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ರಾಜ್ಯದ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಶಿಕ್ಷಣ ಇಲಾಖೆಯು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ಪ್ರವೇಶ ಪತ್ರಗಳನ್ನು ಲಭ್ಯಗೊಳಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾರ್ಚ್ ಮೊದಲ ವಾರದಲ್ಲಿ ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಪರೀಕ್ಷಾ ಸಮಯದ ಅವಧಿಯಲ್ಲಿ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ವಲಯವೆಂದು ಘೋಷಿಸಲಾಗಿದ್ದು, ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

