ಸಿಇಟಿ ಅಭ್ಯರ್ಥಿಗಳೇ ಎಚ್ಚರ| ಪ್ರವೇಶ ಪತ್ರದ ಹೆಸರಲ್ಲಿ ಹರಿದಾಡುತ್ತಿದೆ ನಕಲಿ ಲಿಂಕ್
x

ಸಾಂದರ್ಭಿಕ ಚಿತ್ರ

ಸಿಇಟಿ ಅಭ್ಯರ್ಥಿಗಳೇ ಎಚ್ಚರ| ಪ್ರವೇಶ ಪತ್ರದ ಹೆಸರಲ್ಲಿ ಹರಿದಾಡುತ್ತಿದೆ ನಕಲಿ ಲಿಂಕ್

ಕೆಲವು ಕಿಡಿಗೇಡಿಗಳು ಅಭ್ಯರ್ಥಿಗಳ ವೈಯಕ್ತಿಕ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ನಕಲಿ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಅಂತಹ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡದಂತೆ ಪ್ರಾಧಿಕಾರ ಸೂಚಿಸಿದೆ.


Click the Play button to hear this message in audio format

ಇದೇ ಏಪ್ರಿಲ್ 23 ಮತ್ತು 24ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-2026) ಬರೆಯಲಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಎಚ್ಚರಿಕೆ ನೀಡಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಲಿಂಕ್‌ಗಳನ್ನು ಸೃಷ್ಟಿಸಿದ್ದು, ವಿದ್ಯಾರ್ಥಿಗಳು ಜಾಗರೂಕರಾಗಿರಬೇಕು ಎಂದು ತಿಳಿಸಿದೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಇಎ ಶುಕ್ರವಾರವಷ್ಟೇ ಅಧಿಕೃತ ಲಿಂಕ್ ಬಿಡುಗಡೆ ಮಾಡಿದೆ. ಆದರೆ, ಇದೇ ಸಂದರ್ಭವನ್ನು ಬಳಸಿಕೊಳ್ಳುತ್ತಿರುವ ಕೆಲವು ಕಿಡಿಗೇಡಿಗಳು ಅಭ್ಯರ್ಥಿಗಳ ವೈಯಕ್ತಿಕ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ನಕಲಿ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಅಂತಹ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡದಂತೆ ಪ್ರಾಧಿಕಾರ ಸೂಚಿಸಿದೆ.

ನಕಲಿ ಲಿಂಕ್‌, ಕೆಇಎ ಎಚ್ಚರ

ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌. ಪ್ರಸನ್ನ ಸಾಮಾಜಿಕ ಜಾಲತಾಣದಲ್ಲಿ (ಎಕ್ಸ್‌) ನಲ್ಲಿ ತಿಳಿಸಿದ್ದು, "ಅಭ್ಯರ್ಥಿಗಳು ಯಾವುದೇ ಅಪರಿಚಿತ ಮೂಲಗಳಿಂದ ಬಂದ ಲಿಂಕ್‌ಗಳನ್ನು ನಂಬಬಾರದು. ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ನೀಡಿರುವ ಲಿಂಕ್ ಮೂಲಕವೇ ಪ್ರವೇಶ ಪತ್ರಗಳನ್ನು ಪಡೆಯಬೇಕು. ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ಮುನ್ನ ವೆಬ್‌ಸೈಟ್ ವಿಳಾಸವನ್ನು ಸರಿಯಾಗಿ ಪರಿಶೀಲಿಸಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವೆಬ್‌ಸೈಟ್‌ಗಳಲ್ಲಿ ಹಂಚಿಕೊಳ್ಳಬೇಡಿ" ಎಂದು ತಿಳಿಸಿದ್ದಾರೆ.

ಅರ್ಜಿ ಸಂಖ್ಯೆ ಇಳಿಕೆ

2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಈವರೆಗೆ ಸುಮಾರು 3,15,713 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷಕ್ಕೆ (2025) ಹೋಲಿಸಿದರೆ ನೋಂದಣಿ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಕಳೆದ ವರ್ಷ 3.30 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಬಾರಿಯ ಸಿಇಟಿಯಲ್ಲಿ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಫಾರ್ಮಸಿ, ಪಶುಸಂಗೋಪನೆ ಮತ್ತು ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶವಿದೆ. ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಲಾಗಿತ್ತು, ಇದು ನಕಲಿ ಅರ್ಜಿಗಳನ್ನು ತಡೆಯಲು ಸಹಕಾರಿಯಾಗಿದೆ.

ಅಧಿಕೃತ ಲಿಂಕ್: https://cetonline.karnataka.gov.in/UGCET_Admit_Card_2026/Forms/Login.aspx

(applytocollege.co/kcet_admit_card_2026/) (ಇದು ನಕಲಿ ಲಿಂಕ್ ಆಗಿದ್ದು, ಇದರ ಮೂಲಕ ಪ್ರವೇಶ ಪತ್ರ ಲಭ್ಯವಿರುವುದಿಲ್ಲ ಎಂದು ಕೆಇಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story