ಪ್ರಜ್ವಲ್ ದೇವರಾಜ್‌ಗೆ ಪೋಸ್ಟರ್ ಮೂಲಕ ಶುಭಾಶಯ ಕೋರಿದ ಮಾಫಿಯಾ ತಂಡ
x

ನಟ ಪ್ರಜ್ವಲ್‌ ದೇವರಾಜ್‌ ಅವರ ಮಾಫಿಯಾ ಸಿನಿಮಾದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. 

ಪ್ರಜ್ವಲ್ ದೇವರಾಜ್‌ಗೆ ಪೋಸ್ಟರ್ ಮೂಲಕ ಶುಭಾಶಯ ಕೋರಿದ 'ಮಾಫಿಯಾ' ತಂಡ

ಪ್ರಜ್ವಲ್ ನಟನೆಯ ಮಾಫಿಯಾ ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.


ಇಂದು, ಜುಲೈ 4, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ, ಪ್ರಜ್ವಲ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ 'ಮಾಫಿಯಾ' ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ನಾಯಕ ನಟನಿಗೆ ಶುಭಾಶಯ ಕೋರಿದೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರವು ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.

ತಂದೆ-ಮಗನ ಕಾಂಬಿನೇಷನ್‌ನಲ್ಲಿ 'ಮಾಫಿಯಾ'

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ ಮತ್ತು ಲೋಹಿತ್ ಎಚ್ ನಿರ್ದೇಶಿಸಿರುವ 'ಮಾಫಿಯಾ' ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ವಿಶೇಷವಾಗಿ, ಹಿರಿಯ ನಟ ದೇವರಾಜ್ ಅವರು ಕೂಡ ಈ ಚಿತ್ರದಲ್ಲಿ ನಟಿಸಿದ್ದು, ತಂದೆ ಮತ್ತು ಮಗ ಇಬ್ಬರೂ ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಿರುವುದು ಪ್ರೇಕ್ಷಕರ ಆಸಕ್ತಿಯನ್ನು ಹೆಚ್ಚಿಸಿದೆ. ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಆಕ್ಷನ್ ಪ್ರಿಯರಿಗೆ ದೃಶ್ಯವೈಭವ

ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಮತ್ತು ಹಾಡುಗಳ ಮೂಲಕ 'ಮಾಫಿಯಾ' ಚಿತ್ರವು ಜನಪ್ರಿಯವಾಗಿದೆ. ಚಿತ್ರದಲ್ಲಿ ಮೈನವಿರೇಳಿಸುವ ಆಕ್ಷನ್ ಸನ್ನಿವೇಶಗಳಿದ್ದು, ಆಕ್ಷನ್ ಪ್ರಿಯರಿಗೆ ದೃಶ್ಯವೈಭವ ನೀಡಲಿದೆ. ಚಿತ್ರದ ಬಿಡುಗಡೆಗಾಗಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಬೆಂಗಳೂರು, ಮೈಸೂರು ಮತ್ತು ಹೈದರಾಬಾದ್‌ನಲ್ಲಿ ಚಿತ್ರೀಕರಣಗೊಂಡಿರುವ 'ಮಾಫಿಯಾ' ಚಿತ್ರಕ್ಕೆ ಅನೂಪ್ ಸೀಳಿನ್ ಮತ್ತು ಗಗನ್ ಭಡೇರಿಯಾ ಸಂಗೀತ ಸಂಯೋಜಿಸಿದ್ದು, ಎಸ್. ಪಾಂಡಿಕುಮಾರ್ ಛಾಯಾಗ್ರಹಣವಿದೆ. ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರವು ಗಣೇಶ ಹಬ್ಬಕ್ಕೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ.

---

Read More
Next Story