ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ: ವಿಭಿನ್ನ ಪೋಟೋಶೂಟ್ ಮಾಡಿಸಿಕೊಂಡ ನಟಿ
ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.
ಕಳೆದ ವರ್ಷ ಆಗಸ್ಟ್ನಲ್ಲಿ ವಿವಾಹವಾಗಿದ್ದ ಜೋಡಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಈಗ ಪೋಷಕರಾಗುತ್ತಿದ್ದಾರೆ.
ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ಹಂಚಿಕೊಂಡಿದ್ದಾರೆ. ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ ಉಡುಗೆ ತೊಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.
ಹರ್ಷಿಕಾ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರಾಗಿದ್ದರು. ಮನೆಯವರ ಒಪ್ಪಿಗೆ ಮೇರೆಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕೊಡವ ಸಂಪ್ರದಾಯದಂತೆ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ವಿವಾಹಕ್ಕೆ ಸ್ಯಾಂಡಲ್ವುಡ್ನ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
ತಾವು ಪೋಷಕರಾಗುತ್ತಿರೋ ವಿಚಾರ ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕಾ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.‘ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹರ್ಷಿಕಾ ಬರೆದುಕೊಂಡಿದ್ದಾರೆ.
ತಮ್ಮ ಚೊಚ್ಚಲ ಮಗುವಿನ ಆಗಮನದ ವಿಚಾರ ತಿಳಿಸಲು ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದೆ ಹರ್ಷಿಕಾ ಮತ್ತು ಭುವನ್ ಜೋಡಿ. ವಿಶೇಷವೆಂದರೆ ಈ ಫೋಟೊಶೂಟ್ನಲ್ಲಿ ಹರ್ಷಿಕಾ ಹಾಗೂ ಭುವನ್ರ ಪೋಷಕರು ಸಹ ಕಾಣಿಸಿಕೊಂಡಿದ್ದಾರೆ.