ನೂರು ದಿನಗಳ ಚಿತ್ರೀಕರಣ ಪೂರೈಸಿದ ʼಅಜಾಗ್ರತʼ ಚಿತ್ರ
x
ನಿರ್ದೇಶಕ ಎಂ.ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ.

ನೂರು ದಿನಗಳ ಚಿತ್ರೀಕರಣ ಪೂರೈಸಿದ ʼಅಜಾಗ್ರತʼ ಚಿತ್ರ

ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ ಅಜಾಗ್ರತ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.


Click the Play button to hear this message in audio format

ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ ಅಜಾಗ್ರತ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

ಈ ಚಿತ್ರವನ್ನು ಎಂ.ಶಶಿಧರ್ ನಿರ್ದೇಶನ ಮಾಡುತ್ತಿದ್ದು, ಇತ್ತೀಚಿಗೆ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೆ.ಜಿ ಕೇಕ್ ಕಟ್ ಮಾಡಿಸಿದರು. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿದ್ದು, ಬಾಬಿ ಸಿಂಹ, ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರ ತಾರಾಬಳಗವಿದೆ, ಈ ಚಿತ್ರವನ್ನು ರವಿರಾಜ್ ನಿರ್ಮಾಣ ಮಾಡಿದ್ದು, ಚಿತ್ರ ಕನ್ನಡ,ತೆಲುಗು, ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Read More
Next Story