Allu Arjun: ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಗೆ 2 ಕೋಟಿ ರೂಪಾಯಿ ಪರಿಹಾರ ನೀಡಿದ ಅಲ್ಲು ಅರ್ಜುನ್‌, ಪುಷ್ಪಾ ತಂಡ
x
ಅಲ್ಲು ಅರ್ಜುನ್‌

Allu Arjun: ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಗೆ 2 ಕೋಟಿ ರೂಪಾಯಿ ಪರಿಹಾರ ನೀಡಿದ ಅಲ್ಲು ಅರ್ಜುನ್‌, ಪುಷ್ಪಾ ತಂಡ

Allu Arjun :ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರೊಂದಿಗೆ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.


ಪುಷ್ಪಾ ದಿ ರೂಲ್‌ ಸಿನಿಮಾದ ಪ್ರೀಮಿಯರ್‌ ಶೋ ವೇಳೆ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸಿನಿಮಾ ತಂಡ ಹಾಗೂ ಅಲ್ಲು ಅರ್ಜುನ್‌ 2 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಡಿಸೆಂಬರ್ 4 ರಂದು ಸ್ಥಳೀಯ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಘಟನೆ ನಡೆದಿತ್ತು. ಅದೇ ಘಟನೆಯಲ್ಲಿ ಮಹಿಳೆಯ ಮಗನೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.

ಏತನ್ಮಧ್ಯೆ, ತೆಲಂಗಾಣ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್‌ಡಿಸಿ) ಅಧ್ಯಕ್ಷ ಮತ್ತು ಪ್ರಮುಖ ನಿರ್ಮಾಪಕ ದಿಲ್ ರಾಜು ಅವರ ನಿಯೋಗ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲಿದೆ. ಸರ್ಕಾರ ಮತ್ತು ಚಲನಚಿತ್ರೋದ್ಯಮದ ನಡುವೆ ಆರೋಗ್ಯಕರ ಸಂಬಂಧ ಬೆಳೆಸಲು ಚಲನಚಿತ್ರ ಕ್ಷೇತ್ರದವರು ಇಲ್ಲಿಗೆ ಭೇಡಿ ನೀಡಲಿದ್ದಾರೆ.

ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರೊಂದಿಗೆ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ .

ಅಲ್ಲು ಅರವಿಂದ್ ಅವರು ವೈದ್ಯರೊಂದಿಗೆ ಮಾತನಾಡಿದ ನಂತರ ಸಮಾಧಾನ ವ್ಯಕ್ತಪಡಿಸಿದರು, ಅವರು ಹುಡುಗ ಚೇತರಿಸಿಕೊಳ್ಳುತ್ತಿದ್ದಾನೆ ಮತ್ತು ಸ್ವಯಂ ಉಸಿರಾಟ ಆರಂಭಿಸಿದ್ದಾನೆ ಎಂದು ಹೇಳಿದ್ದಾರೆ. ಸಂಪೂರ್ಣ ಚೇತರಿಕೆಯ ಬಗ್ಗೆ ವೈದ್ಯರು ಆಶಾವಾದಿಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಎರಡು ಕೋಟಿ ರೂಪಾಯಿ ಪರಿಹಾರ

ಅಲ್ಲು ಅರ್ಜುನ್ (1 ಕೋಟಿ ರೂ.), ಪುಷ್ಪಾ ನಿರ್ಮಾಣ ಕಂಪನಿ ಮೈತ್ರಿ ಮೂವಿ ಮೇಕರ್ಸ್ (50 ಲಕ್ಷ ರೂ.) ಮತ್ತು ಚಿತ್ರದ ನಿರ್ದೇಶಕ ಸುಕುಮಾರ್ (50 ಲಕ್ಷ ರೂ.) ಬಾಲಕನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದಾರೆ.

ಅರವಿಂದ್ ಚೆಕ್ ಗಳನ್ನು ದಿಲ್ ರಾಜು ಅವರಿಗೆ ಹಸ್ತಾಂತರಿಸಿ, ಹುಡುಗನ ಕುಟುಂಬಕ್ಕೆ ತಿಳಿಸುವಂತೆ ವಿನಂತಿಸಿದರು.

ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಡಿಸೆಂಬರ್ 4ರಂದು 'ಪುಷ್ಪ 2' ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ವೇಳೆ ಕಾಲ್ತುಳಿತಕ್ಕೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರ 8 ವರ್ಷದ ಮಗ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಘಟನೆಯ ನಂತರ, ಮೃತ ಮಹಿಳೆಯ ಕುಟುಂಬವು ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಡಪ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಸೆಂಬರ್ 13 ರಂದು ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ನಗರ ಪೊಲೀಸರು ಬಂಧಿಸಿದ್ದರು. ತೆಲಂಗಾಣ ಹೈಕೋರ್ಟ್ ಅದೇ ದಿನ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿತು ಮತ್ತು ಡಿಸೆಂಬರ್ 14 ರಂದು ಬೆಳಿಗ್ಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು.

Read More
Next Story