ಹತ್ತು ವರ್ಷಗಳ ನಂತರ ಮರುಬಿಡುಗಡೆಯಾಗಲಿದೆ ʼಬಹದ್ದೂರ್ʼ!
x
ಜೂನ್ 21 ರಂದು ಬಹದ್ದೂರ್ ಸಿನಿಮಾ ಮರು ಬಿಡುಗಡೆಯಾಗುತ್ತಿದೆ.

ಹತ್ತು ವರ್ಷಗಳ ನಂತರ ಮರುಬಿಡುಗಡೆಯಾಗಲಿದೆ ʼಬಹದ್ದೂರ್ʼ!

ಧ್ರುವ ಸರ್ಜಾ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ʼಬಹದ್ದೂರ್ʼ ಸಿನಿಮಾ ಹತ್ತು ವರ್ಷಗಳ ನಂತರ ಜೂ.21ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.


Click the Play button to hear this message in audio format

ಧ್ರುವ ಸರ್ಜಾ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ ʼಬಹದ್ದೂರ್ʼ ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ. ಈ ಚಿತ್ರ ಪ್ರಸಾರವಾದಾಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೈಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

Read More
Next Story