ಝೈದ್ ಖಾನ್‌ಗೆ ಆಕ್ಷನ್ ಕಟ್ ಹೇಳಲಿದ್ದಾರೆ ʼಉಪಾಧ್ಯಕ್ಷʼ ನಿರ್ದೇಶಕ
x

ಝೈದ್ ಖಾನ್‌ಗೆ ಆಕ್ಷನ್ ಕಟ್ ಹೇಳಲಿದ್ದಾರೆ ʼಉಪಾಧ್ಯಕ್ಷʼ ನಿರ್ದೇಶಕ

ಉಪಾಧ್ಯಕ್ಷ ಸಿನಿಮಾದ ನಿರ್ದೇಶಕ ಅನಿಲ್ ಕುಮಾರ್ ʼಬನಾರಸ್ʼ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಝೈದ್ ಖಾನ್ ಗೆ ಆಕ್ಷನ್‌ ಕಟ್‌ ಹೇಳಲಿದ್ದಾರೆ.


ಈ ವರ್ಷದ ಮೊದಲ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ʼಉಪಾಧ್ಯಕ್ಷʼದ ನಿರ್ದೇಶಕ ಅನಿಲ್ ಕುಮಾರ್ಅವರ ಮುಂದಿನ ಚಿತ್ರದ ತಯಾರಿ ಬಿರುಸಿನಿಂದ ಸಾಗುತ್ತಿದ್ದು, ʼಬನಾರಸ್ʼ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಝೈದ್ ಖಾನ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಕೆಂಪೇಗೌಡ ಚಿತ್ರಕ್ಕೆ ಸಂಭಾಷಣೆ ಬರೆಯುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅನಿಲ್ ಕುಮಾರ್ ಸುಮಂತ್ - ರಾಧಿಕಾ ಪಂಡಿತ್ ಅಭಿನಯದ ದಿಲ್ ವಾಲ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನಕ್ಕೆ ಕಾಲಿಟ್ಟರು.

ಮಾಲಾಶ್ರೀ ಅಭಿನಯದ ಶಕ್ತಿ ಹಾಗೂ ಶರಣ್ ನಟನೆಯ ರ‌್ಯಾಂಬೊ ೨ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ. ಇತ್ತೀಚಿಗೆ ತೆರೆಕಂಡ ಚಿಕ್ಕಣ್ಣ ಅಭಿನಯದ ʼಉಪಾಧ್ಯಕ್ಷʼ ಸಿನಿಮಾ ದೊಡ್ಡಮಟ್ಟದ ಯಶಸ್ಸು ಕಂಡಿದ್ದು, ʼಉಪಾಧ್ಯಕ್ಷʼ ನಂತರ ಅನಿಲ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರ ಯಾವುದು? ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಅನಿಲ್ ಕುಮಾರ್ ಹಾಗೂ ಝೈದ್ ಖಾನ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರವೊಂದು ಮೂಡಿಬರಲಿದೆ.

ʼಬನಾರಸ್ʼ ಚಿತ್ರದ ನಂತರ ಸಾಕಷ್ಟು ಕಥೆ ಕೇಳಿರುವ ಝೈದ್ ಖಾನ್ ಅವರು ಈ ಚಿತ್ರದ ಕಥೆಯನ್ನು ಒಪ್ಪಿಕೊಂಡಿದ್ದಾರೆ. ಕ್ಲಾಸ್ & ಮಾಸ್ ಇಬ್ಬರು ಆಡಿಯನ್ಸ್ ಇಷ್ಟಪಡುವ ಕಥೆಯಿದು. ಹೆಸರಾಂತ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನುರಿತ ತಂತ್ರಜ್ಞರ ದೊಡ್ಡ ತಂಡವೇ ಈ ಚಿತ್ರದಲ್ಲಿರಲಿದೆ. ತಾಂತ್ರಿಕವರ್ಗ ಹಾಗೂ ತಾರಾಬಳಗದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

Read More
Next Story