ಪಂಚ ಭಾಷೆಗಳಲ್ಲಿ ʼಗನ್ಸ್ ಅಂಡ್ ರೋಸಸ್ʼಗೆ ಸೆನ್ಸಾರ್ ಪೂರ್ಣ
x
ಗನ್ಸ್ ಅಂಡ್ ರೋಸಸ್ ಏಪ್ರಿಲ್ ಕೊನೆಯಲ್ಲಿ ಚಿತ್ರ ತೆರೆಗೆ ಬರಲಿದೆ‌.

ಪಂಚ ಭಾಷೆಗಳಲ್ಲಿ ʼಗನ್ಸ್ ಅಂಡ್ ರೋಸಸ್ʼಗೆ ಸೆನ್ಸಾರ್ ಪೂರ್ಣ

ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ʼಗನ್ಸ್ ಅಂಡ್ ರೋಸಸ್ʼ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.


Click the Play button to hear this message in audio format

ಎಚ್ ಎಸ್ ಶ್ರೀನಿವಾಸ ಕುಮಾರ್ ನಿರ್ದೇಶನದ ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ಗನ್ಸ್ ಅಂಡ್ ರೋಸಸ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ʼಗನ್ಸ್ ಅಂಡ್ ರೋಸಸ್ʼ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಐದು ಭಾಷೆಗಳಲ್ಲೂ ಪ್ರಾದೇಶಿಕ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ವೀಕ್ಷಿಸಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಟೀಸರ್ ಹಾಗೂ ಹಾಡುಗಳು ರಿಲೀಸ್ ಆಗಲಿದ್ದು, ಏಪ್ರಿಲ್ ಕೊನೆಯಲ್ಲಿ ಚಿತ್ರ ತೆರೆಗೆ ಬರಲಿದೆ.

ಶರತ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮಲ್ಲೇನಹಳ್ಳಿ ರಾಜು ನಿರ್ಮಾಣ ನಿರ್ವಹಣೆ ಮತ್ತು ಮುನಿರಾಜ್ ಅವರ ಸಹ ನಿರ್ದೇಶನವಿದೆ. ಎಚ್ ಆರ್ ನಟರಾಜ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಅರ್ಜುನ್ ಅವರಿಗೆ ನಾಯಕಿಯಾಗಿ ಯಶ್ಚಿಕ ನಿಷ್ಕಲ ನಟಿಸಿದ್ದಾರೆ. ಕಿಶೋರ್, ಶೋಭ್ ರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್, ಡೈಮಂಡ್ ರಾಜಣ್ಣ ಮುಂತಾದವರು ʼಗನ್ಸ್ ಅಂಡ್ ರೋಸಸ್ʼ ಚಿತ್ರದ ತಾರಾಬಳಗದಲ್ಲಿದ್ದಾರೆ.

Read More
Next Story