
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಚಿತ್ರದ ಅಧಿಕೃತ ಪ್ರೋಮೋ ಏಪ್ರಿಲ್ 2ರ ಹನುಮ ಜಯಂತಿಯಂದು ಬಿಡುಗಡೆಯಾಗಲಿದೆ.
Ramayana| ಹನುಮ ಜಯಂತಿಗೆ ಯಶ್ ನಟನೆಯ 'ರಾಮಾಯಣ' ಪ್ರೋಮೋ ಬಿಡುಗಡೆ
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಚಿತ್ರದ ಅಧಿಕೃತ ಪ್ರೋಮೋ ಏಪ್ರಿಲ್ 2ರ ಹನುಮ ಜಯಂತಿಯಂದು ಬಿಡುಗಡೆಯಾಗಲಿದೆ. ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾವಣನಾಗಿ ಯಶ್ ನಟಿಸಿರುವ ಈ ಚಿತ್ರ 2026ರಲ್ಲಿ ತೆರೆಗೆ ಬರಲಿದೆ.
ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ 'ರಾಮಾಯಣ' ಚಿತ್ರದ ಅಧಿಕೃತ ಪ್ರೋಮೋ ಏಪ್ರಿಲ್ 2ರಂದು ಹನುಮ ಜಯಂತಿಯಂದು ಬಿಡುಗಡೆಯಾಗಲು ಸಜ್ಜಾಗಿದೆ.
ಎರಡು ಭಾಗಗಳಲ್ಲಿ ತೆರೆಗೆ ಬರಲಿರುವ ಈ ದೃಶ್ಯ ವೈಭವದಲ್ಲಿ ಬಾಲಿವುಡ್ ನಟ ರಣ್‌ಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಳ್ಳುತ್ತಿದ್ದರೆ, ಸೀತೆಯಾಗಿ ಸಾಯಿ ಪಲ್ಲವಿ ಮತ್ತು ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸುತ್ತಿದ್ದಾರೆ. ವಿಶೇಷವಾಗಿ, ಸ್ಯಾಂಡಲ್‌ವುಡ್ ನಟ 'ರಾಕಿಂಗ್ ಸ್ಟಾರ್' ಯಶ್ ಈ ಚಿತ್ರದಲ್ಲಿ ರಾವಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಮೊದಲ ಭಾಗವು 2026ರ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಲಿದ್ದು, ಎರಡನೇ ಭಾಗ 2027ರಲ್ಲಿ ಬರಲಿದೆ. ವಿಶ್ವದರ್ಜೆಯ ಐಮ್ಯಾಕ್ಸ್ 3ಡಿ ತಂತ್ರಜ್ಞಾನದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಅಂತರಾಷ್ಟ್ರೀಯ ಸಂಗೀತಗಾರ ಹ್ಯಾನ್ಸ್ ಜಿಮ್ಮರ್ ಹಾಗೂ ಎ.ಆರ್. ರೆಹಮಾನ್ ಜಂಟಿಯಾಗಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
ಈ ಪ್ರೋಮೋಗೆ ಭಾರತೀಯ ಸೆನ್ಸಾರ್ ಮಂಡಳಿಯು ಈಗಾಗಲೇ 'ಯು' (U) ಪ್ರಮಾಣಪತ್ರವನ್ನು ನೀಡಿದ್ದು, ಮಾರ್ಚ್ 30ರಂದು ಈ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಮೂಲಕ ಚಿತ್ರದ ಬಿಡುಗಡೆಗೆ ಸತತ ಏಳು ತಿಂಗಳ ಸುದೀರ್ಘ ಪ್ರಚಾರ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆತಂತಾಗಿದೆ. ದೃಶ್ಯ ವೈಭವ ಹಾಗೂ ಅದ್ಭುತ ತಾರಾಗಣದಿಂದ ಕೂಡಿರುವ ಈ ಚಿತ್ರವು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಒಂದಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ನಿರ್ದೇಶಕ ನಿತೇಶ್ ತಿವಾರಿ ಅವರ ಕಲ್ಪನೆಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ರಾಮನಾಗಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ಇನ್ನು ರಾಕಿಂಗ್ ಸ್ಟಾರ್ ಯಶ್ ಅವರು 'ರಾವಣ'ನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಅವರೇ ಸಹ-ನಿರ್ಮಾಪಕರೂ ಆಗಿರುವುದು ವಿಶೇಷ. ಚಿತ್ರದಲ್ಲಿ ಹನುಮಂತನಾಗಿ ಸನ್ನಿ ಡಿಯೋಲ್ ಮತ್ತು ಲಕ್ಷ್ಮಣನಾಗಿ ರವಿ ದುಬೆ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ವಿಶ್ವದರ್ಜೆಯ ಐಮ್ಯಾಕ್ಸ್ ತಂತ್ರಜ್ಞಾನದಲ್ಲಿ ಚಿತ್ರೀಕರಿಸಲಾಗುತ್ತಿರುವ ಈ ಸಿನಿಮಾಗೆ ಹಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಅವರಂತಹ ಸಂಗೀತ ದಿಗ್ಗಜರು ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ.
ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಆರಂಭಿಸಿರುವ ಚಿತ್ರತಂಡ, ಮಾರ್ಚ್ ಅಂತ್ಯದ ವೇಳೆಗೆ ಅಮೆರಿಕಾದಲ್ಲಿ ದೊಡ್ಡ ಮಟ್ಟದ ಮಾಧ್ಯಮಗೋಷ್ಠಿ ನಡೆಸಲು ಯೋಜಿಸಿದೆ. 4,000 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗವು 2026ರ ದೀಪಾವಳಿಗೆ ತೆರೆಕಾಣಲಿದ್ದರೆ, ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ. ಈ ಘೋಷಣೆಯು ಚಿತ್ರಪ್ರೇಮಿಗಳಲ್ಲಿ ಹೊಸ ಸಂಚಲನ ಮೂಡಿಸಿದ್ದು, ಏಪ್ರಿಲ್ 2ರಂದು ಹೊರಬರಲಿರುವ 'ರಾಮ'ನ ದರ್ಶನಕ್ಕಾಗಿ ಇಡೀ ವಿಶ್ವವೇ ಕಾಯುತ್ತಿದೆ.

