ಮದುವೆಯ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ- ವಿಜಯ್
x

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕೊನೆಗೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆಯ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ- ವಿಜಯ್

ಉದಯಪುರದಲ್ಲಿ ನೆರವೇರಿದ ಅದ್ಧೂರಿ ಹಾಗೂ ಸಾಂಪ್ರದಾಯಿಕ ವಿವಾಹದ ನಂತರ, ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು ಈ ನವಜೋಡಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.


Click the Play button to hear this message in audio format

ಉದಯಪುರದಲ್ಲಿ ಗುರುವಾರ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಉದಯಪುರದ ಮಹಾರಾಣಾ ಪ್ರತಾಪ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಈ ನವಜೋಡಿ, ಮುಗುಳ್ನಗುವಿನೊಂದಿಗೆ ಪಾಪರಾಜಿಗಳಿಗೆ ಪೋಸ್‌ ನೀಡಿದರು.

ಮದುವೆಯ ನಂತರ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡ ಈ ಜೋಡಿಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವಿಮಾನ ನಿಲ್ದಾಣದಲ್ಲಿ ನವಜೋಡಿ ಕ್ಯಾಮೆರಾ ಕಣ್ಣಿಗೆ ಅತ್ಯಂತ ಆಕರ್ಷಕವಾಗಿ ಕಂಡರು. ರಶ್ಮಿಕಾ ಮಂದಣ್ಣ ಕೆಂಪು ಬಣ್ಣದ ಚೂಡಿದಾರ್ ಧರಿಸಿ ಮಿಂಚಿದರೆ, ವಿಜಯ್ ದೇವರಕೊಂಡ ತಿಳಿ ನೀಲಿ ಬಣ್ಣದ ಕುರ್ತಾ-ಪೈಜಾಮಾದಲ್ಲಿ ಕ್ಲಾಸಿಕ್ ಲುಕ್ ನೀಡಿದ್ದರು. ವಿಮಾನ ನಿಲ್ದಾಣಕ್ಕೆ ಪ್ರವೇಶಿಸುವ ಮುನ್ನ ಈ ಜೋಡಿ ಪಾಪರಾಜಿಗಳತ್ತ ಕೈಬೀಸಿ, ಫ್ಲೈಯಿಂಗ್ ಕಿಸ್ ನೀಡುವ ಮೂಲಕ ತಮ್ಮ ಸಂತೋಷವನ್ನು ಹಂಚಿಕೊಂಡರು. ಪರಸ್ಪರ ಕೈ ಹಿಡಿದು ಮುಗುಳ್ನಗುತ್ತಾ ಪೋಸ್ ನೀಡಿದ್ದು ಅಭಿಮಾನಿಗಳ ಗಮನ ಸೆಳೆಯಿತು.

ಎರಡು ಸಂಪ್ರದಾಯಗಳಂತೆ ನೆರವೇರಿದ ವಿವಾಹ

ಫೆಬ್ರವರಿ 26ರಂದು ಉದಯಪುರದ ಐಟಿಸಿ ಮೆಮೆಂಟೋಸ್ ಹೋಟೆಲ್‌ನಲ್ಲಿ ನಡೆದ ಈ ವಿವಾಹ ಮಹೋತ್ಸವವು ಅತ್ಯಂತ ಆಪ್ತರ ಸಮ್ಮುಖದಲ್ಲಿ ನೆರವೇರಿತು. ವಿಶೇಷವೆಂದರೆ, ವಿಜಯ್ ಅವರ ತೆಲುಗು (ಆಂಧ್ರ) ಸಂಪ್ರದಾಯ ಹಾಗೂ ರಶ್ಮಿಕಾ ಅವರ ಕೊಡವ ಸಂಪ್ರದಾಯಗಳೆರಡರ ಪ್ರಕಾರವೂ ವಿವಾಹದ ವಿಧಿವಿಧಾನಗಳು ನಡೆದವು. ಈ ಅದ್ಧೂರಿ ಸಮಾರಂಭದಲ್ಲಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಮತ್ತು ನಟಿ ಕಲ್ಯಾಣಿ ಪ್ರಿಯದರ್ಶನ್ ಸೇರಿದಂತೆ ಚಿತ್ರರಂಗದ ಪ್ರಮುಖ ಗಣ್ಯರು ಭಾಗವಹಿಸಿದ್ದರು.

ಮಾರ್ಚ್ 4ಕ್ಕೆ ಹೈದರಾಬಾದ್‌ನಲ್ಲಿ ಔತಣಕೂಟ

ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಚಿತ್ರರಂಗದ ಸಹೋದ್ಯೋಗಿಗಳಿಗಾಗಿ ಈ ನವಜೋಡಿ ಭರ್ಜರಿ ಔತಣಕೂಟವನ್ನು ಏರ್ಪಡಿಸಿದ್ದಾರೆ ಎನ್ನಲಾಗಿದೆ. 'ಗೀತಾ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಚಿತ್ರಗಳ ಮೂಲಕ ಸಿನಿಪ್ರಿಯರ ನೆಚ್ಚಿನ ಜೋಡಿಯಾಗಿದ್ದ ಇವರು, ಶೀಘ್ರದಲ್ಲೇ ತೆರೆಕಾಣಲಿರುವ ಚಿತ್ರವೊಂದರಲ್ಲಿ ಮತ್ತೊಮ್ಮೆ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Read More
Next Story