
'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಮೊದಲ ಹಾಡು 'ತಬಾಹಿ ಇಂದು ಬಿಡುಗಡೆಯಾಗಿದೆ.
'Toxic'| ಯೋಗರಾಜ್ ಭಟ್ ಸಾಹಿತ್ಯದ ಮೊದಲ ಹಾಡು 'ತಬಾಹಿ' ಅನಾವರಣ
ಈ ಹಾಡಿನಲ್ಲಿ ಯಶ್ ಅವರ ರಗಡ್ ಲುಕ್ ಮತ್ತು ಕಿಯಾರಾ ಅಡ್ವಾಣಿ ಅವರ ಗ್ಲಾಮರಸ್ ಅಂದ ಅಭಿಮಾನಿಗಳ ಮನ ಗೆದ್ದಿದೆ. ಸಮುದ್ರ ತೀರದ ಹಿನ್ನೆಲೆಯಲ್ಲಿ ಇಬ್ಬರ ನಡುವಿನ ರೋಮ್ಯಾಂಟಿಕ್ ಕೆಮಿಸ್ಟ್ರಿ ಅದ್ಭುತವಾಗಿ ಮೂಡಿಬಂದಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಮೊದಲ ಹಾಡು 'ತಬಾಹಿ ಇಂದು ಬಿಡುಗಡೆಯಾಗಿದೆ. ಈ ಹಾಡು ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ.
ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ರೊಮ್ಯಾಂಟಿಕ್ ಕೆಮಿಸ್ಟ್ರಿ ಗಮನ ಸೆಳೆಯುತ್ತಿದೆ. ಸಮುದ್ರ ತೀರದ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಸಂಯೋಜಿಸಿ ಹಾಡಿದ್ದಾರೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರದ ಕನ್ನಡ ಆವೃತ್ತಿಯ ಹಾಡಿಗೆ ಖ್ಯಾತ ಸಾಹಿತಿ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ಉಳಿದಂತೆ ಹಿಂದಿಯಲ್ಲಿ ರಾಜ್ ಶೇಖರ್, ತೆಲುಗಿನಲ್ಲಿ ರಾಮಜೋಗಯ್ಯ ಶಾಸ್ತ್ರಿ, ತಮಿಳಿನಲ್ಲಿ ವಿಘ್ನೇಶ್ ಶಿವನ್ ಮತ್ತು ಮಲಯಾಳಂನಲ್ಲಿ ರಫೀಕ್ ಅಹಮ್ಮದ್ ಅವರು ಸಾಹಿತ್ಯ ಒದಗಿಸಿದ್ದಾರೆ.
'ತಬಾಹಿʼ ಹಾಡು ಇಲ್ಲಿದೆ...
ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಜೀವ್ ರವಿ ಅವರ ಛಾಯಾಗ್ರಹಣ ಹಾಗೂ ಉಜ್ವಲ್ ಕುಲಕರ್ಣಿ ಅವರ ಸಂಕಲನವಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಈಗ ಅಂತಿಮ ಹಂತದ ಕೆಲಸಗಳಲ್ಲಿದ್ದು, ಅಭಿಮಾನಿಗಳಲ್ಲಿ ಕುತೂಹಲದ ಅಲೆ ಎಬ್ಬಿಸಿದೆ. ಈ ಬೆನ್ನಲ್ಲೇ ಚಿತ್ರತಂಡ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದು, ಮಾರ್ಚ್ 8ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆ ಮಾಡಲು ದಿನಾಂಕ ನಿಗದಿಪಡಿಸಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಇವೆಂಟ್ ಅತ್ಯಂತ ವಿಶೇಷವಾಗಿರಲಿದ್ದು, ವಿವಿಧ ಭಾಷೆಗಳ ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರದ ಟ್ರೈಲರ್ ಲಾಂಚ್‌ಗೆ ಭರ್ಜರಿ ತಯಾರಿಗಳು ನಡೆಯುತ್ತಿವೆ. ಚಿತ್ರದ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಸಿನಿಮಾದ ಬಗ್ಗೆ ಕೆಲವು ಎಕ್ಸ್‌ಕ್ಲೂಸಿವ್ ಮಾಹಿತಿಗಳನ್ನು ಹಂಚಿಕೊಂಡಿದ್ದು, 'ಟಾಕ್ಸಿಕ್' ಶ್ರೀಮಂತ ದೃಶ್ಯವೈಭವ ಹಾಗೂ ಆಧುನಿಕ ಸಂಗೀತದ ಸಮ್ಮಿಶ್ರಣವಾಗಿರಲಿದೆ ಎಂದು ತಿಳಿಸಿದ್ದಾರೆ.
ಈ ಚಿತ್ರವು ರೆಟ್ರೋ ಲುಕ್ ಹೊಂದಿದ್ದರೂ, ಸಂಗೀತ ಮಾತ್ರ ಅತ್ಯಂತ ಫ್ರೆಶ್ ಮತ್ತು ಮಾಡರ್ನ್ ಆಗಿರಲಿದೆ. ಸಿನಿಮಾದ ಹಾಡುಗಳು ಹಾಗೂ ಹಿನ್ನೆಲೆ ಸಂಗೀತಕ್ಕಾಗಿ ಲೈವ್ ಆರ್ಕೆಸ್ಟ್ರಾವನ್ನು ಬಳಸಲಾಗಿದ್ದು, ಪ್ರೇಕ್ಷಕರಿಗೆ ಇದು ಹೊಸ ಮಾದರಿಯ ಸಿನೆಮಾ ಅನುಭವ ನೀಡಲಿದೆ ಎಂದು ರವಿ ಬಸ್ರೂರು ಭರವಸೆ ನೀಡಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ಮಾರ್ಚ್ 19ರಂದು ವಿಶ್ವಾದ್ಯಂತ ತೆರೆಕಾಣಲಿದೆ.

