ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ
x

ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

"ಮಿಲೇಸುರ್ ಮೇರಾ ತುಮಾರಾ" ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.


ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷ ರೂಪಾಯಿ ರೂಪಾಯಿ ಚೆಕ್ ನೀಡಲಾಯಿತು. ಗೀತರಚನೆಕಾರ ಜಾವೆದ್​ ಅಖ್ತರ್ ಅವರು ಜೊತೆಗಿದ್ದರು.

"ಮಿಲೇಸುರ್ ಮೇರಾ ತುಮಾರಾ" ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರಿಗೆ ನೆನಪಿಸಿದರು. ಕರ್ನಾಟಕ ರಾಜ್ಯ ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಮೆಚ್ಚುಗೆ ಸೂಚಿಸಿದರು.

ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ. ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದರು. ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, ಜಿಎಸ್​ಟಿ ಅನುಕೂಲ ಮಾಡಿಕೊಡುವಂತೆ ಕೌನ್ಸಿಲ್​​ನಲ್ಲಿಅಭಿಪ್ರಾಯ ಮಂಡಿಸುವೆ ಎಂದು ಸಿಎಂ ಭರವಸೆ ಕೊಟ್ಟರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, 16ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು.

Read More
Next Story