
ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ
ಸೋಶಿಯಲ್ ಮೀಡಿಯಾದಲ್ಲಿ ನಟನಿಗಾಗಿ ಅಭಿಮಾನಿಯೊಬ್ಬ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ಇದೀಗ ಭಾರೀ ವೈರಲ್ ಆಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಸೇರಿದ್ದಾರೆ. ಇದರಿಂದ ದರ್ಶನ್ ಅಭಿಮಾನಿಗಳು ಹತಾಶೆಗೊಂಡಿದ್ದಾರೆ. ಆದರೆ ದರ್ಶನ್ ಅಭಿಮಾನಿಯೊಬ್ಬರ ಹುಚ್ಚುತನ ಮಿತಿಮೀರಿದೆ.
ಸೋಶಿಯಲ್ ಮೀಡಿಯಾದಲ್ಲಿ ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ಇದೀಗ ಭಾರೀ ವೈರಲ್ ಆಗುತ್ತಿದೆ.
‘Brand of sandalwood d boss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿ ಬಾಸ್’ ಎಂದು ಬರೆಯಲಾಗಿದೆ.
ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದು, ಏನು ಅರಿಯದ ಮಗುವನ್ನು ಖೈದಿ ಮಾಡಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ‘ಶಿಕ್ಷಣ ಮುಖ್ಯ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಇದು ಸರಿ ಅಲ್ಲ’ ಎಂದು ಬುದ್ಧಿವಾದ ಹೇಳಿದ್ದಾರೆ.