
ʼದಿಲ್ ಖುಷ್ʼ ಸಿನಿಮಾ ರಿಲೀಸ್‌ಗೆ ಡೇಟ್ ಫಿಕ್ಸ್
ಪ್ರಮೋದ್ ಜಯ ನಿರ್ದೇಶನದ ʼದಿಲ್ ಖುಷ್ʼ ಸಿನಿಮಾ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ.
ರೊಮ್ಯಾಂಟಿಕ್ ಕಾಮಿಡಿ ಕಥಾ ಹಂದರ ಹೊಂದಿರುವ ʼದಿಲ್ ಖುಷ್ʼ ಸಿನಿಮಾ ಮಾರ್ಚ್ 22 ರಂದು ತೆರೆಗೆ ಬರಲಿದೆ.
ಪ್ರಮೋದ್ ಜಯ ನಿರ್ದೇಶನದ ʼದಿಲ್ ಖುಷ್ʼ ಸಿನಿಮಾ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ.
ʼದಿಲ್ ಖುಷ್ʼ ಚಿತ್ರದ ನಾಯಕನಾಗಿ ರಂಜಿತ್ ನಟಿಸಿದ್ದಾರೆ. ಸ್ಪಂದನ ಸೋಮಣ್ಣ ಈ ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿದ್ದಾರೆ.