ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ
ಬಾಲಿವುಡ್ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ದಂಪತಿ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.
ಬಾಲಿವುಡ್ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ದಂಪತಿ ಹೆಣ್ಣು ಮಗುವಿಗೆ
ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಭಾನುವಾರ (ಸೆಪ್ಟೆಂಬರ್ 8)ನಟಿ ದೀಪಿಕಾ ಪಡುಕೋಣೆ ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ದೀಪಿಕಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಉಜ್ಜಲಾ ಪಡುಕೋಣೆ ಜೊತೆಗಿದ್ದರು.
ನಿನ್ನೆ ಗಣೇಶ ಚತುರ್ಥಿಯಂದು ಮುಂಜಾನೆ ರಣ್ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ಗಣೇಶ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದರು.
ಈ ಬಗ್ಗೆ ಅವರು ಜಂಟಿ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಸುದ್ದಿಯನ್ನು ಪ್ರಕಟಿಸಿದ್ದಾರೆ. "ಹೆಣ್ಣು ಮಗುವಿಗೆ ಸ್ವಾಗತ! 8.9.2024," ಎಂದು ಅದು ದಂಪತಿ ಪೋಸ್ಟ್ ಮಾಡಿದ್ದಾರೆ.
ರಣ್ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ಇದೀಗ ಮೊದಲ ಬಾರಿಗೆ ಪೋಷಕರಾಗಿದ್ದಾರೆ.
Next Story