ಚೌಕಿದಾರ್ ಪೃಥ್ವಿ ಅಂಬರ್ ಜೋಡಿಯಾದ ಧನ್ಯಾ ರಾಮ್‌ಕುಮಾರ್
x
ಧನ್ಯಾ ರಾಮ್ ಕುಮಾರ್

'ಚೌಕಿದಾರ್' ಪೃಥ್ವಿ ಅಂಬರ್ ಜೋಡಿಯಾದ ಧನ್ಯಾ ರಾಮ್‌ಕುಮಾರ್

'ಚೌಕಿದಾರ್' ಸಿನಿಮಾದಲ್ಲಿ ಪೃಥ್ವಿ ಅಂಬರ್ ಗೆ ಜೋಡಿಯಾಗಿ ದೊಡ್ಮನೆ ಬ್ಯೂಟಿ ಧನ್ಯಾ ರಾಮ್ ಕುಮಾರ್ ನಟಿಸುತ್ತಿದ್ದಾರೆ.


Click the Play button to hear this message in audio format

ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ 'ಚೌಕಿದಾರ್' ಸಿನಿಮಾದಲ್ಲಿ ಪೃಥ್ವಿ ಅಂಬರ್ ಗೆ ಜೋಡಿಯಾಗಿ ದೊಡ್ಮನೆ ಬ್ಯೂಟಿ ಧನ್ಯಾ ರಾಮ್ ಕುಮಾರ್ ನಟಿಸುತ್ತಿದ್ದಾರೆ.

ಪೃಥ್ವಿ ಅಂಬರ್ ನಾಯಕನಾಗಿ ಅಭಿನಯಿಸುತ್ತಿರುವ ʼಚೌಕಿದಾರ್ʼ ಸಿನಿಮಾದಲ್ಲಿ ಧನ್ಯಾ ರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ʼನಿನ್ನ ಸನಿಹಕೆʼ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಪರಿಚಯಿತರಾಗಿದ್ದ ಧನ್ಯಾ ಇತ್ತೀಚೆಗಷ್ಟೇ ʼದಿ ಜಡ್ಜ್ ಮೆಂಟ್ʼ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಸದ್ಯ ʼಕಾಲಾಪತ್ತರ್ʼ ಬಿಡುಗಡೆಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ʼಚೌಕಿದಾರ್ʼ ಬಳಗ ಸೇರಿಕೊಂಡಿದ್ದಾರೆ.

'ಚೌಕಿದಾರ್' ಬಹುಭಾಷೆಯಲ್ಲಿ ಮೂಡಿ ಬರಲಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬರ್‌ ಈ ಚಿತ್ರದಲ್ಲಿ ಆ್ಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್‌ಟೈನರ್ ಆಗಿ ಬಿಂಬಿತವಾಗಿರುವ ಈ ಚಿತ್ರದಲ್ಲಿ ಹಿರಿಯ ನಟ ಸಾಯಿಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

Read More
Next Story