`ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ಡಾಲಿ ಧನಂಜಯ್‌
x
ನಾಡಪ್ರಭು ಕೆಂಪೇಗೌಡ ಅವರ ಪಾತ್ರದಲ್ಲಿ ನಟ ಡಾಲಿ ಧನಂಜಯ್‌

`ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ಡಾಲಿ ಧನಂಜಯ್‌

ನಿರ್ದೇಶಕ ಟಿ ಎಸ್ ನಾಗಾಭರಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ನಾಡಪ್ರಭು ಕೆಂಪೇಗೌಡ' ಸಿನಿಮಾದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದು, ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.


Click the Play button to hear this message in audio format

ನಿರ್ದೇಶಕ ಟಿ ಎಸ್ ನಾಗಾಭರಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ನಾಡಪ್ರಭು ಕೆಂಪೇಗೌಡ' ಸಿನಿಮಾದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದು, ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.

ಡಾಲಿ‌ ಧನಂಜಯ್ 'ನಾಡಪ್ರಭು ಕೆಂಪೇಗೌಡ' ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೆಟ್ಟಿಗರಿಂದ ಪ್ರಶಂಸೆ ಕೇಳಿಬರುತ್ತಿದೆ. ಇದೊಂದು ಐತಿಹಾಸಿ ಸಿನಿಮಾ ಆಗಿರುವುದರಿಂದ ಸಾಕಷ್ಟು ಸಂಶೋಧನೆ ಬೇಕು. ಟಿ.ಎಸ್ ನಾಗಾಭರಣ ಕಳೆದ ಎರಡು ದಶಕಗಳಿಂದ ಕೆಂಪೇಗೌಡರ ಬಗ್ಗೆ ಸಂಶೋಧನೆ ಮಾಡಿ ಈಗ ಸಿನಿಮಾ ಮಾಡುವುದಕ್ಕೆ ಮುಂದಾಗಿದ್ದಾರೆ.

ಈ ಹಿಂದೆ ದಿನೇಶ್ ಬಾಬು ಅವರು ನಾಡಪ್ರಭು ಕೆಂಪೇಗೌಡರ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ‘ನಾಗಾಭರಣ ನ್ಯಾಯಾಲಯದ ಮೂಲಕ ತಡೆ ತಂದರು.

"ಬಂಗಾರದ ಜಿಂಕೆ", "ಜನುಮದ ಜೋಡಿ", "ಕಲ್ಲರಳಿ ಹೂವಾಗಿ" ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳನ್ನು ನೀಡಿದ ಮೇರು ನಿರ್ದೇಶಕ ಡಾ.ಟಿ.ಎಸ್

ನಾಗಾಭರಣ ಅವರ ಎರಡು ದಶಕಗಳ ಕನಸಿನ ಕೂಸಾದ "ನಾಡಪ್ರಭು ಕೆಂಪೇಗೌಡ", ಕನ್ನಡ ಚಿತ್ರರಂಗದಲ್ಲಿ ಬಹಳಷ್ಟು ಸದ್ದು ಮಾಡಿರುವ ಜೀವನ ಚರಿತ್ರೆಯ ಕಥನವಾಗಿದೆ. ಹಲವಾರು ವರ್ಷಗಳ ನಂತರ ಮತ್ತೆ ಆಕ್ಷನ್ ಕಟ್ ಹೇಳಲು ಹೊರಟಿರುವ‌ ನಾಗಾಭರಣ ಅವರಿಗೆ ಈ ಚಿತ್ರವು ಕಮ್ ಬ್ಯಾಕ್ ಆಗಲಿದೆ ಎಂಬುದು ಸಿನಿ ಪ್ರೇಕ್ಷಕರ ಅಭಿಪ್ರಾಯ. ನಾಗಾಭರಣ ಅವರ ಪುತ್ರ ನಿರ್ದೇಶಕ ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ. ಶಶಿಧರ ಅಡಪ ಅವರು ಸಿನಿಮಾದ ಸೆಟ್ ನೋಡಿಕೊಳ್ಳುತ್ತಿದ್ದಾರೆ.

Read More
Next Story